ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 26th, 11:04 am
ಇಂದಿನ ರೋಜ್ಗಾರ್ ಮೇಳದಲ್ಲಿ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಅಪಾರ ಪರಿಶ್ರಮದ ನಂತರ ಈ ಯಶಸ್ಸನ್ನು ಸಾಧಿಸಿದ್ದೀರಿ. ಲಕ್ಷಾಂತರ ಅಭ್ಯರ್ಥಿಗಳಿಂದ ನಿಮ್ಮನ್ನು ಆಯ್ಕೆ ಮಾಡಲಾಗಿದೆ; ಆದ್ದರಿಂದ, ಈ ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.ರೋಜ್ ಗಾರ್ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
September 26th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 23rd, 08:54 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ
May 23rd, 01:30 pm
ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.The India of today is moving forward in every direction that is necessary to become a tech leader: PM Modi
May 11th, 11:00 am
PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.