ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 09th, 02:51 pm

ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.

ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 09th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಡಿಜಿಟಲ್ ಇಂಡಿಯಾ ಉಪಕ್ರಮದ 10 ವರ್ಷಗಳನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ

July 01st, 09:40 am

ಡಿಜಿಟಲ್ ಇಂಡಿಯಾ ಉಪಕ್ರಮವು ಯಶಸ್ವಿಯಾಗಿ 10 ವರ್ಷ ಪೂರ್ಣಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದು ದಶಕದ ನಂತರ, ಈ ಉಪಕ್ರಮವು ಅಸಂಖ್ಯಾತ ಜನರನ್ನು ತಲುಪಿದ್ದು ಸಬಲೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ಪಯಣಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ. 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪದಿಂದ ಭಾರತವು ಡಿಜಿಟಲ್ ಪಾವತಿಗಳಲ್ಲಿ ಅಪಾರ ಪ್ರಗತಿ ಸಾಧಿಸಿದೆ ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ

November 20th, 09:55 pm

ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.

ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು

April 13th, 12:33 pm

ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.