16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ

July 02nd, 10:22 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ

July 02nd, 10:14 pm

ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.

ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

May 10th, 03:45 pm

ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 10th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 04:08 pm

ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.

ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

December 18th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್‌ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ

December 16th, 03:56 pm

ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.

List of Outcomes Visit of Prime Minister to Jordan

December 15th, 11:52 pm

During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.

ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 09th, 02:51 pm

ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.

ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 09th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 03:44 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್‌ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ

October 08th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು

June 24th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಭಾರತ - ಕ್ರೊಯೇಷಿಯಾ ನಾಯಕರ ಹೇಳಿಕೆ

June 19th, 06:06 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಯು ದ್ವಿಪಕ್ಷೀಯ ಪಾಲುದಾರಿಕೆಗೆ ಹೊಸ ವೇಗವನ್ನು ನೀಡಿದ್ದು, ವಿಶೇಷವಾಗಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಎರಡೂ ಆರ್ಥಿಕತೆಗಳ ಪೂರಕತೆಯನ್ನು ಎತ್ತಿ ತೋರಿಸಿದೆ. (i) ಕೃಷಿ ಸಹಕಾರದ ಕುರಿತಾದ ತಿಳುವಳಿಕಾ ಒಡಂಬಡಿಕೆ; (ii) ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಹಕಾರ ಕಾರ್ಯಕ್ರಮ; (iii) ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ (ಸಿ.ಇ.ಪಿ-CEP); ಮತ್ತು (iv) ಜಾಗ್ರೆಬ್ ವಿಶ್ವವಿದ್ಯಾಲಯದಲ್ಲಿ ಹಿಂದಿ ಪೀಠವನ್ನು ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿರುವುದನ್ನು ಇಬ್ಬರೂ ಪ್ರಧಾನಮಂತ್ರಿಗಳು ಸ್ವಾಗತಿಸಿದರು.

ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ

June 02nd, 03:00 pm

ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.

ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿಯ ಸಮಾರೋಪದಲ್ಲಿ ನೀಡಲಾದ ಜಂಟಿ ಹೇಳಿಕೆ

April 23rd, 12:44 pm

ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ಗೌರವಾನ್ವಿತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಏಪ್ರಿಲ್ 22 ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಿದರು.

ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು ಮತ್ತು ಭಾರತ-ಸೌದಿ ಅರೇಬಿಯಾ ವ್ಯೂಹಾತ್ಮಕ ಪಾಲುದಾರಿಕೆ ಮಂಡಳಿಯ ಸಹ-ಅಧ್ಯಕ್ಷತೆ ವಹಿಸಿದರು

April 23rd, 02:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 22, 2025 ರಂದು ಸೌದಿ ಅರೇಬಿಯಾ ರಾಜ್ಯಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರನ್ನು ಜೆಡ್ಡಾದ ಮಹಾರಾಜರ ಅರಮನೆಯಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್‌ ಅನುವಾದ

January 14th, 10:45 am

ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.

PM Modi addresses the 150th Foundation Day celebrations of India Meteorological Department

January 14th, 10:30 am

PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.

ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 04th, 11:15 am

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,