ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.ಸೆಪ್ಟೆಂಬರ್ 26ರಂದು ಬಿಹಾರ ನಲ್ಲಿ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
September 25th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26ರಂದು ಬೆಳಗ್ಗೆ 11 ಗಂಟೆಗೆ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಗೆ ವಿಡಿಯೊ ಕಾನಧಿರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
July 01st, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ ಪ್ರೋತ್ಸಾಹಧನ ನೀಡಲಾಗುವುದು. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತೃತ ಪ್ರಯೋಜನಗಳನ್ನು ನೀಡಲಾಗುವುದು. 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸಲು ಪ್ರಧಾನ ಮಂತ್ರಿಯವರ ಐದು ಯೋಜನೆಗಳ ಪ್ಯಾಕೇಜ್‌ನ ಭಾಗವಾಗಿ 2024-25ರ ಕೇಂದ್ರ ಬಜೆಟ್‌ನಲ್ಲಿ 2 ಲಕ್ಷ ಕೋಟಿ ರೂ.ಗಳ ಅನುದಾನದೊಂದಿಗೆ ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಯನ್ನು ಘೋಷಿಸಲಾಯಿತು.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಗುಜರಾತ್ ನ ನವಸಾರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
March 08th, 11:50 am
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ; ನವಸಾರಿಯ ಸಂಸತ್ ಸದಸ್ಯ ಮತ್ತು ನನ್ನ ಸಂಪುಟ ಸಹೋದ್ಯೋಗಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್; ಗೌರವಾನ್ವಿತ ಪಂಚಾಯತ್ ಸದಸ್ಯರು; ವೇದಿಕೆಯಲ್ಲಿ ಉಪಸ್ಥಿತರಿರುವ ಲಕ್ಷಾಧಿಪತಿ ದೀದಿ (ಲಖ್ಪತಿ ದೀದಿ)ಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಮತ್ತು ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ನೆರೆದಿರುವ ಎಲ್ಲರಿಗೂ, ವಿಶೇಷವಾಗಿ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳೇ - ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ನವಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
March 08th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ನವಸಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಈ ವಿಶೇಷ ದಿನದಂದು ನಾಡಿನ ಎಲ್ಲಾ ಮಹಿಳೆಯರಿಗೆ ಶುಭ ಹಾರೈಸಿದರು. ಮಹಾಕುಂಭದಲ್ಲಿ ಗಂಗಾಮಾತೆಯ ಆಶೀರ್ವಾದ ಪಡೆದಿದ್ದೆ, ಇಂದು ಮಾತೃಶಕ್ತಿಯ ಮಹಾಕುಂಭದಲ್ಲಿ ಆಶೀರ್ವಾದ ದೊರೆತಿದೆ ಎಂದು ಹೇಳಿದರು. ಪ್ರಧಾನಮಂತ್ರಿಯವರು ಇಂದು ಗುಜರಾತಿನಲ್ಲಿ ಜಿ-ಸಫಲ್ (ಜೀವನೋಪಾಯ ವೃದ್ಧಿಗಾಗಿ ಅಂತ್ಯೋದಯ ಕುಟುಂಬಗಳಿಗೆ ಗುಜರಾತ್ ಯೋಜನೆ) ಮತ್ತು ಜಿ-ಮೈತ್ರಿ (ಗ್ರಾಮೀಣ ಆದಾಯ ಪರಿವರ್ತನೆಗಾಗಿ ವ್ಯಕ್ತಿಗಳಿಗೆ ಗುಜರಾತ್ ಮಾರ್ಗದರ್ಶನ ಮತ್ತು ವೇಗವರ್ಧನೆ) ಎಂಬ ಎರಡು ಯೋಜನೆಗಳಿಗೆ ಚಾಲನೆ ನೀಡಿದರು. ವಿವಿಧ ಯೋಜನೆಗಳ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ ಅವರು ಈ ಸಾಧನೆಗಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು.ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 08:05 pm
ನೀವೆಲ್ಲರೂ ದಣಿದಿರಬೇಕು, ಅರ್ನಬ್ ಅವರ ಗಟ್ಟಿಯಾದ ಧ್ವನಿಯಿಂದ ನಿಮ್ಮ ಕಿವಿಗಳು ದಣಿದಿರಬೇಕು, ಅರ್ನಬ್ ಕುಳಿತುಕೊಳ್ಳಿ, ಇದು ಚುನಾವಣಾ ಸಮಯವಲ್ಲ. ಮೊದಲನೆಯದಾಗಿ, ಈ ನವೀನ ಪ್ರಯೋಗಕ್ಕಾಗಿ ನಾನು ರಿಪಬ್ಲಿಕ್ ಟಿವಿಯನ್ನು ಅಭಿನಂದಿಸುತ್ತೇನೆ. ನೀವು ಯುವಕರನ್ನು ತಳಮಟ್ಟದಲ್ಲಿ ತೊಡಗಿಸಿಕೊಳ್ಳುವ ಮೂಲಕ, ಇಷ್ಟು ದೊಡ್ಡ ಸ್ಪರ್ಧೆ ಆಯೋಜಿಸಿ ಇಲ್ಲಿಗೆ ಕರೆತಂದಿದ್ದೀರಿ. ದೇಶದ ಯುವಕರು ರಾಷ್ಟ್ರೀಯ ಚರ್ಚೆಯಲ್ಲಿ ತೊಡಗಿಸಿಕೊಂಡಾಗ, ಆಲೋಚನೆಗಳಲ್ಲಿ ಹೊಸತನ ಇರುತ್ತದೆ, ಅದು ಇಡೀ ಪರಿಸರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ, ಈ ಸಮಯದಲ್ಲಿ ನಾವು ಈ ಹೊಸ ಶಕ್ತಿಯನ್ನು ಅನುಭವಿಸುತ್ತಿದ್ದೇವೆ. ಒಂದು ರೀತಿಯಲ್ಲಿ, ಯುವಕರ ಒಳಗೊಳ್ಳುವಿಕೆಯಿಂದ, ನಾವು ಪ್ರತಿಯೊಂದು ಬಂಧವನ್ನು ಮುರಿಯಲು, ಮಿತಿಗಳನ್ನು ಮೀರಿ ಹೋಗಲು ಸಾಧ್ಯವಾಗುತ್ತದೆ, ಆದರೆ ಸಾಧಿಸಲಾಗದ ಗುರಿ ಇಲ್ಲ. ತಲುಪಲಾಗದ ಯಾವುದೇ ಗಮ್ಯಸ್ಥಾನವಿಲ್ಲ. ಈ ಸಮಾವೇಶ(ಶೃಂಗಸಭೆ)ಕ್ಕಾಗಿ ರಿಪಬ್ಲಿಕ್ ಟಿವಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದೆ. ಈ ಶೃಂಗಸಭೆಯ ಯಶಸ್ಸಿಗೆ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಸರಿ, ಇದರಲ್ಲಿ ನನ್ನದೂ ಸ್ವಲ್ಪ ಸ್ವಾರ್ಥವಿದೆ, ಒಂದು, ಕಳೆದ ಕೆಲವು ದಿನಗಳಿಂದ ನಾನು 1 ಲಕ್ಷ ಯುವಕರನ್ನು ರಾಜಕೀಯಕ್ಕೆ ತರಬೇಕು, 1 ಲಕ್ಷ ಜನರು ತಮ್ಮ ಕುಟುಂಬಗಳಲ್ಲಿ ಮೊದಲ ಬಾರಿಗೆ ರಾಜಕೀಯಕ್ಕೆ ಬರುವವರು ಎಂದು ಯೋಚಿಸುತ್ತಿದ್ದೇನೆ, ಆದ್ದರಿಂದ ಒಂದು ರೀತಿಯಲ್ಲಿ, ಇಂತಹ ಘಟನೆಗಳು ನನ್ನ ಈ ಗುರಿಗೆ ವೇದಿಕೆಯನ್ನು ಸಿದ್ಧಪಡಿಸುತ್ತಿವೆ. ಎರಡನೆಯದಾಗಿ, ನನ್ನ ವೈಯಕ್ತಿಕ ಲಾಭವಿದೆ, ವೈಯಕ್ತಿಕ ಲಾಭವೆಂದರೆ 2029ರಲ್ಲಿ ಮತ ಚಲಾಯಿಸಲು ಹೋಗುವವರಿಗೆ 2014ಕ್ಕಿಂತ ಮೊದಲು ಪತ್ರಿಕೆಗಳ ಮುಖ್ಯಾಂಶಗಳು ಏನೆಂದು ತಿಳಿದಿರುವುದಿಲ್ಲ, ಅವರಿಗೆ ತಿಳಿದಿಲ್ಲ, 10-10, 12-12 ಲಕ್ಷ ಕೋಟಿ ಹಗರಣಗಳು ಇದ್ದವು, ಅದು ಅವರಿಗೆ ತಿಳಿದಿಲ್ಲ. ಆದರೆ ಅವರು 2029ರಲ್ಲಿ ಮತ ಚಲಾಯಿಸಲು ಹೋಗುವಾಗ, ಹೋಲಿಕೆ ಮಾಡಲು ಅವರ ಮುಂದೆ ಏನೂ ಇರುವುದಿಲ್ಲ. ಆದ್ದರಿಂದ, ನಾನು ಆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು ಮತ್ತು ಈ ವೇದಿಕೆಯು ಆ ಕೆಲಸವನ್ನು ಬಲಪಡಿಸುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
March 06th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಡಪಂನಲ್ಲಿ ನಡೆದ ರಿಪಬ್ಲಿಕ್ ಪ್ಲೀನರಿ ಶೃಂಗಸಭೆ 2025ರಲ್ಲಿ ಭಾಗವಹಿಸಿದ್ದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಮತ್ತು ಮಹತ್ವದ ಹ್ಯಾಕಥಾನ್ ಸ್ಪರ್ಧೆಯನ್ನು ಆಯೋಜಿಸುವ ನವೀನ ವಿಧಾನಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅಭಿನಂದಿಸಿದರು. ರಾಷ್ಟ್ರದ ಯುವಕರು ರಾಷ್ಟ್ರೀಯ ಸಂವಾದದಲ್ಲಿ ತೊಡಗಿಸಿಕೊಂಡಾಗ, ಅದು ಆಲೋಚನೆಗಳಿಗೆ ಹೊಸತನವನ್ನು ತರುತ್ತದೆ ಮತ್ತು ಅವರ ಶಕ್ತಿಯಿಂದ ಇಡೀ ಪರಿಸರವನ್ನು ತುಂಬುತ್ತದೆ ಎಂದು ಅವರು ಹೇಳಿದರು. ಈ ಶಕ್ತಿಯನ್ನು ಶೃಂಗಸಭೆಯಲ್ಲಿ ಅನುಭವಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು. ಯುವಕರ ಪಾಲ್ಗೊಳ್ಳುವಿಕೆಯು ಎಲ್ಲಾ ಅಡೆತಡೆಗಳನ್ನು ಮುರಿಯಲು ಮತ್ತು ಗಡಿಗಳನ್ನು ಮೀರಿ ಹೋಗಲು ಸಹಾಯ ಮಾಡುತ್ತದೆ, ಪ್ರತಿ ಗುರಿಯನ್ನು ಸಾಧಿಸಬಹುದು ಮತ್ತು ಪ್ರತಿ ಗಮ್ಯಸ್ಥಾನವನ್ನು ತಲುಪಬಹುದು ಎಂದು ಅವರು ಹೇಳಿದರು. ಈ ಶೃಂಗಸಭೆಗಾಗಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದ್ದಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅವರು ಶ್ಲಾಘಿಸಿದರು ಮತ್ತು ಅದರ ಯಶಸ್ಸಿಗೆ ಶುಭ ಹಾರೈಸಿದರು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ಭಾರತದ ರಾಜಕೀಯಕ್ಕೆ ಕರೆತರುವ ತಮ್ಮ ಕಲ್ಪನೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 16th, 10:15 am
100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
November 16th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.