ಅಂತಾರಾಷ್ಟ್ರೀಯ ವಿಶೇಷಚೇತನರ ದಿನದಂದು ದಿವ್ಯಾಂಗರಿಗೆ ಘನತೆ, ಲಭ್ಯತೆ ಮತ್ತು ಅವಕಾಶಗಳನ್ನು ಖಾತ್ರಿಪಡಿಸುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಮಂತ್ರಿ
December 03rd, 04:09 pm
ಅಂತಾರಾಷ್ಟ್ರೀಯ ವಿಶೇಷಚೇತನರ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದಿವ್ಯಾಂಗ ಸಹೋದರ ಸಹೋದರಿಯರಿಗೆ ಘನತೆ, ಲಭ್ಯತೆ ಮತ್ತು ಅವಕಾಶಗಳನ್ನು ಒದಗಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ದಿವ್ಯಾಂಗರು ತಮ್ಮ ಸೃಜನಶೀಲತೆ ಮತ್ತು ದೃಢಸಂಕಲ್ಪದಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಮತ್ತು ನಮ್ಮ ರಾಷ್ಟ್ರೀಯ ಪ್ರಗತಿಯನ್ನು ಗಮನಾರ್ಹವಾಗಿ ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಕಳೆದ ಕೆಲವು ವರ್ಷಗಳಲ್ಲಿ ಭಾರತವು ಕಾನೂನುಗಳು, ಲಭ್ಯವಾಗಬಹುದಾದ ಮೂಲಸೌಕರ್ಯ, ಸಮಗ್ರ ಶಿಕ್ಷಣ ನೀತಿಗಳು ಮತ್ತು ಸಹಾಯಕ ತಂತ್ರಜ್ಞಾನಗಳಲ್ಲಿನ ನಾವೀನ್ಯತೆಗಳ ಮೂಲಕ ದಿವ್ಯಾಂಗ ಕಲ್ಯಾಣದತ್ತ ಪ್ರಮುಖ ಹೆಜ್ಜೆಗಳನ್ನಿಟ್ಟಿದೆ. ಮುಂಬರುವ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡುವುದನ್ನು ಮುಂದುವರಿಸುತ್ತೇವೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ
March 30th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.ಒಂಬತ್ತು ವರ್ಷ ತುಂಬಿದ ಸುಗಮ್ಯ ಭಾರತ ಅಭಿಯಾನವನ್ನು ಆಚರಿಸಿದ ಪ್ರಧಾನಮಂತ್ರಿ
December 03rd, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸುಗಮ್ಯ ಭಾರತ ಅಭಿಯಾನದ 9ನೇ ವರ್ಷವನ್ನು ಆಚರಿಸಿದರು. ದಿವ್ಯಾಂಗ ಸಹೋದರಿಯರು ಮತ್ತು ಸಹೋದರರಿಗೆ ಪ್ರವೇಶಾವಕಾಶ, ಸಮಾನತೆ ಮತ್ತು ಅವಕಾಶವನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ದಿವ್ಯಾಂಗ ಸಹೋದರಿಯರು ಮತ್ತು ಸಹೋದರರ ಧೈರ್ಯ ಮತ್ತು ಸಾಧನೆಗಳನ್ನು ಶ್ಲಾಘಿಸಿದ ಶ್ರೀ ಮೋದಿಯವರು, ಇದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದರು.