ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
May 23rd, 04:20 pm
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ ಮಾರ್ಕೊ ರುಬಿಯೊ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆಪ್ರಧಾನ ಮಂತ್ರಿ ಅವರಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್; ದ್ವಿಪಕ್ಷೀಯ ಸಹಕಾರದ ಪರಿಶೀಲನೆ ಮತ್ತು ಪಶ್ಚಿಮ ಏಷ್ಯಾ ಮತ್ತು ಹೊರ್ಮುಜ್ ಜಲಸಂಧಿಯ ಕುರಿತು ಚರ್ಚೆ
April 14th, 10:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದರು.ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಅಮೆರಿಕ ಅಧ್ಯಕ್ಷರಿಂದ ಪ್ರಧಾನಮಂತ್ರಿಗಳಿಗೆ ದೂರವಾಣಿ ಕರೆ
March 24th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ್ದಾರೆ.ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಪ್ರಧಾನಮಂತ್ರಿ ಅವರು ಮಾತನಾಡಿದರು
February 02nd, 11:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಮಾತನಾಡಿದರು. ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18 ಕ್ಕೆ ಇಳಿಸುವ ಮಹತ್ತರ ಘೋಷಣೆಗಾಗಿ ಶ್ರೀ ಮೋದಿ ಅವರು ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷರಾದ ಶ್ರೀ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.ಅಮೆರಿಕ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ
December 11th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದರು.ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಹೇಳಿದ್ದು, ಪ್ರಜಾಪ್ರಭುತ್ವ ಆದರ್ಶಗಳು ಮತ್ತು ಜಾಗತಿಕ ಶಾಂತಿಯ ಬದ್ಧತೆಯನ್ನು ಪುನರುಚ್ಚರಿಸಿದರು
October 22nd, 08:25 am
ದೀಪಗಳ ಹಬ್ಬದ ಸಂದರ್ಭದಲ್ಲಿ ಆತ್ಮೀಯ ದೀಪಾವಳಿ ಶುಭಾಶಯ ಮತ್ತು ದೂರವಾಣಿ ಕರೆಗಾಗಿ ಅಮೆರಿಕ ಅಧ್ಯಕ್ಷ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ, ಆ ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಅಧ್ಯಕ್ಷ ಟ್ರಂಪ್ ಅವರ ಪ್ರಾಮಾಣಿಕ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ
October 13th, 07:59 pm
ಎರಡು ವರ್ಷಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯು ಅವರ ಕುಟುಂಬಸ್ಥರ ಧೈರ್ಯ ಹಾಗೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಪ್ರಯತ್ನಗಳು ಮತ್ತು ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ದೃಢಸಂಕಲ್ಪದ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರನ್ನು ಅಭಿನಂದಿಸಿದರು
October 09th, 09:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಐತಿಹಾಸಿಕ ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು.ಅಮೆರಿಕ ಅಧ್ಯಕ್ಷರಾದ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದ ಸ್ವಾಗತಿಸಿದ ಪ್ರಧಾನಮಂತ್ರಿ
October 09th, 09:55 am
ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಾಯಕತ್ವವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
October 04th, 07:58 am
ಗಾಜಾದಲ್ಲಿ ಶಾಂತಿ ಪ್ರಯತ್ನಗಳು ನಿರ್ಣಾಯಕ ಪ್ರಗತಿ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಾಯಕತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯ ಸೂಚನೆಗಳು ಪ್ರಸ್ತುತ ನಡೆಯುತ್ತಿರುವ ಮಾನವೀಯ ಮತ್ತು ರಾಜತಾಂತ್ರಿಕ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯನ್ನು ಪ್ರತಿನಿಧಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಗಾಜಾ ಸಂಘರ್ಷದ ಕುರಿತಾಗಿ ಅಧ್ಯಕ್ಷರಾದ ಟ್ರಂಪ್ ಅವರ ಶಾಂತಿ ಉಪಕ್ರಮವನ್ನು ಪ್ರಧಾನಮಂತ್ರಿ ಸ್ವಾಗತಿಸಿದ್ದಾರೆ
September 30th, 09:19 am
ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಧ್ಯಕ್ಷರಾದ ಡೊನಾಲ್ಡ್ ಜೆ. ಟ್ರಂಪ್ ಅವರ ಸಮಗ್ರ ಯೋಜನೆಯ ಘೋಷಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.ಜನ್ಮದಿನದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
September 16th, 11:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮೂಲಕ 75ನೇ ಜನ್ಮದಿನದ ಶುಭಾಶಯ ಕೋರಿದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮಂತೆಯೇ, ಭಾರತ-ಅಮೆರಿಕ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್
September 16th, 10:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
September 10th, 07:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ್ದಾರೆ ಹಾಗೂ ಎರಡು ರಾಷ್ಟ್ರಗಳ ನಡುವೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಎರಡೂ ರಾಷ್ಟ್ರಗಳು ಜನರ ಉಜ್ವಲ, ಸಮೃದ್ಧ ಭವಿಷ್ಯದ ಭದ್ರತೆಗೆ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಹೇಳಿದ್ದಾರೆ.ಅಧ್ಯಕ್ಷ ಟ್ರಂಪ್ ಅವರ ಭಾವನೆಗಳನ್ನು ಆಳವಾಗಿ ಪ್ರಶಂಸಿಸುತ್ತೇನೆ ಮತ್ತು ಸಂಪೂರ್ಣವಾಗಿ ಒಪ್ಪುತ್ತೇನೆ: ಪ್ರಧಾನಮಂತ್ರಿ
September 06th, 10:27 am
ಭಾರತ ಮತ್ತು ಅಮೆರಿಕ ದೇಶಗಳ ಸಂಬಂಧಗಳ ಬಗ್ಗೆ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು ಮತ್ತು ಸಕಾರಾತ್ಮಕ ಮೌಲ್ಯಮಾಪನವನ್ನು ತಾವು ಆಳವಾಗಿ ಮೆಚ್ಚುವುದಾಗಿ ಮತ್ತು ಸಂಪೂರ್ಣವಾಗಿ ಒಪ್ಪುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಭಾರತ ಮತ್ತು ಅಮೆರಿಕಗಳು ದೇಶಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯತ್ತಿನ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಪ್ರಧಾನಮಂತ್ರಿ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ದೂರವಾಣಿ ಸಂಭಾಷಣೆ ಕುರಿತು ವಿದೇಶಾಂಗ ಕಾರ್ಯದರ್ಶಿ ಹೇಳಿಕೆ
June 18th, 12:32 pm
ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಮತ್ತು ಅಮೆರಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನಿಗದಿಯಾಗಿತ್ತು. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಹಿಂತಿರುಗಬೇಕಾದ ಹಿನ್ನೆಲೆಯಲ್ಲಿ ಈ ಸಭೆ ಸಾಧ್ಯವಾಗಲಿಲ್ಲ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ಈ ವಾರ ಭಾರತದ ಬಗ್ಗೆ ವಿಶ್ವ
April 22nd, 12:27 pm
ರಾಜತಾಂತ್ರಿಕ ಫೋನ್ ಕರೆಗಳಿಂದ ಹಿಡಿದು ಹೊಸ ವೈಜ್ಞಾನಿಕ ಆವಿಷ್ಕಾರಗಳವರೆಗೆ, ಈ ವಾರ ಜಾಗತಿಕ ವೇದಿಕೆಯಲ್ಲಿ ಭಾರತದ ಉಪಸ್ಥಿತಿಯು ಸಹಯೋಗ, ನಾವೀನ್ಯತೆ ಮತ್ತು ಸಾಂಸ್ಕೃತಿಕ ಹೆಮ್ಮೆಯಿಂದ ಗುರುತಿಸಲ್ಪಟ್ಟಿದೆ.ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ
April 21st, 08:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾದ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
March 17th, 08:52 pm
ಕಳೆದ ತಿಂಗಳು ವಾಷಿಂಗ್ಟನ್ ಡಿ.ಸಿ.ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷರಾದ ಟ್ರಂಪ್ ಅವರೊಂದಿಗೆ ನಡೆಸಿದ ಫಲಪ್ರದ ಚರ್ಚೆಗಳನ್ನು ಪ್ರಧಾನಮಂತ್ರಿಗಳು ನೆನಪು ಮಾಡಿಕೊಂಡರು.