ಯುಕೆ ಪ್ರಧಾನಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಹೇಳಿಕೆ
July 24th, 04:00 pm
ಈ ಆತ್ಮೀಯ ಸ್ವಾಗತ ಮತ್ತು ಅದ್ಧೂರಿ ಗೌರವಕ್ಕೆ ನಾನು ಕೃತಜ್ಞನಾಗಿದ್ದೇನೆ. ಇಂದು ಚೆಕರ್ಸ್‌ನಲ್ಲಿ, ನಾವು ಹೊಸ ಇತಿಹಾಸ ಸೃಷ್ಟಿಸಲಿದ್ದೇವೆ. ಭಾರತ ಮತ್ತು ಯುಕೆ ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಒಟ್ಟಾಗಿ ಬರುತ್ತಿವೆ.ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿಯನ್ನು ಭೇಟಿಯಾದರು
July 24th, 03:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜುಲೈ 23-24, 2025 ರಂದು ಯುನೈಟೆಡ್ ಕಿಂಗ್ ಡಮ್ ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದರು. ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ ಯುಕೆ ಪ್ರಧಾನಮಂತ್ರಿಗಳ ನಿವಾಸವಾದ ಚೆಕರ್ಸ್‌ನಲ್ಲಿ ಪ್ರಧಾನಿ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ನಂತರ ಇಬ್ಬರು ನಾಯಕರು ಮುಖಾಮುಖಿ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು.