ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 01st, 10:45 am

ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

October 01st, 10:30 am

ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.

ಅಕ್ಟೋಬರ್ 1 ರಂದು ಆರ್‌ಎಸ್‌ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

September 30th, 10:30 am

ಅಕ್ಟೋಬರ್ 1, 2025ರಂದು ಬೆಳಿಗ್ಗೆ 10:30 ಕ್ಕೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ರಾಷ್ಟ್ರಕ್ಕೆ ಆರ್‌ಎಸ್‌ಎಸ್‌ನ ಕೊಡುಗೆಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.