ಶಿಕ್ಷಕರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

September 05th, 08:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನವಾದ ಇಂದು ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಪ್ರಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ವಿಶಿಷ್ಟ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶಿಕ್ಷಕರ ದಿನದ ಅಂಗವಾಗಿ ಶುಭಾಶಯ ಕೋರಿದ ಪ್ರಧಾನಮಂತ್ರಿ

September 05th, 08:07 am

ಶಿಕ್ಷಕರ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನದ ಅಂಗವಾಗಿ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ, ಅವರು ಭಾರತದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣನ್‌ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.