ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 03rd, 09:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ, ಎಂದು ಶ್ರೀ ಮೋದಿ ಹೇಳಿದ್ದಾರೆ.

ಬಿಹಾರದ ಗಯಾಜಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 22nd, 12:00 pm

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಜಿ, ಜನಪ್ರಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಜಿತನ್ ರಾಮ್ ಮಾಂಝಿ ಜಿ, ರಾಜೀವ್ ರಂಜನ್ ಸಿಂಗ್, ಚಿರಾಗ್ ಪಾಸ್ವಾನ್ ಜಿ, ರಾಮ್ ನಾಥ್ ಠಾಕೂರ್ ಜಿ, ನಿತ್ಯಾನಂದ ರೈ ಜಿ, ಸತೀಶ್ ಚಂದ್ರ ದುಬೆ ಜಿ, ರಾಜ್ ಭೂಷಣ್ ಚೌಧರಿ ಜಿ, ಉಪಮುಖ್ಯಮಂತ್ರಿಗಳಾದ ಸಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಬಿಹಾರ ಸರ್ಕಾರದ ಸಚಿವರೆ, ನನ್ನ ಸಂಸದ ಮಿತ್ರರಾದ ಉಪೇಂದ್ರ ಕುಶ್ವಾಹ ಜಿ, ಇಲ್ಲಿರುವ ಇತರ ಸಂಸದರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಗಯಾದಲ್ಲಿ 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು

August 22nd, 11:20 am

ಬಿಹಾರದ ಗಯಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮತ್ತು ಮೋಕ್ಷದ ಪವಿತ್ರ ನಗರವಾದ ಗಯಾಕ್ಕೆ ಪ್ರಧಾನಿಯವರು ನಮನ ಸಲ್ಲಿಸಿದರು ಮತ್ತು ವಿಷ್ಣುಪಾದ ಮಂದಿರದ ಅದ್ಭುತ ಭೂಮಿಯಿಂದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಗಯಾ ಆಧ್ಯಾತ್ಮಿಕತೆ ಮತ್ತು ಶಾಂತಿಯ ಭೂಮಿ ಎಂದು ಶ್ರೀ ಮೋದಿ ಹೇಳಿದರು. ಭಗವಾನ್ ಬುದ್ಧ ಜ್ಞಾನೋದಯವನ್ನು ಪಡೆದದ್ದು ಈ ಪುಣ್ಯಭೂಮಿಯಲ್ಲಿ ಎಂದು ಅವರು ಹೇಳಿದರು. ಗಯಾ ಪ್ರಾಚೀನ ಮತ್ತು ಅತ್ಯಂತ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಈ ಪ್ರದೇಶದ ಜನರು ನಗರವನ್ನು ಗಯಾ ಎಂದು ಮಾತ್ರ ಕರೆಯಬಾರದು, ಬದಲಿಗೆ ಗೌರವಯುತವಾಗಿ ಗಯಾಜಿ ಎಂದು ಕರೆಯಬೇಕೆಂದು ಬಯಸುತ್ತಾರೆ ಎಂದು ಹೇಳಿದ ಪ್ರಧಾನಿ, ಈ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಅಭಿನಂದಿಸಿದರು. ಗಯಾದ ತ್ವರಿತ ಅಭಿವೃದ್ಧಿಗಾಗಿ ಕೇಂದ್ರ ಮತ್ತು ಬಿಹಾರದಲ್ಲಿರುವ ತಮ್ಮ ಸರ್ಕಾರಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

April 27th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.

ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

January 19th, 11:30 am

In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.

ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

December 14th, 05:50 pm

ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು

December 14th, 05:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.

ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

December 03rd, 08:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕುವಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 26th, 08:15 pm

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು

November 26th, 08:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

December 03rd, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸ್ಮರಣೆ, ನಮನ

December 03rd, 09:25 am

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದ್ದಾರೆ.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಮುಂದಿನ 25 ವರ್ಷಗಳು ದೇಶಕ್ಕಾಗಿ ಕರ್ತವ್ಯದ ಹಾದಿಯಲ್ಲಿ ನಡೆಯುವ ವರ್ಷಗಳು: ಪ್ರಧಾನಿ

July 12th, 06:44 pm

ಪಾಟ್ನಾದಲ್ಲಿ ನಡೆದ ಬಿಹಾರ ವಿಧಾನಸಭೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಬಿಹಾರ ವಿಧಾನಸಭೆಯ ಭವ್ಯ ಇತಿಹಾಸವನ್ನು ನೆನಪಿಸಿಕೊಂಡ ಪ್ರಧಾನಿ, ಇಲ್ಲಿನ ವಿಧಾನ ಸಭಾ ಕಟ್ಟಡದಲ್ಲಿ ಒಂದರ ಹಿಂದೆ ಒಂದರಂತೆ ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

PM addresses the closing ceremony of the Centenary celebrations of the Bihar Legislative Assembly

July 12th, 06:43 pm

PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.

ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

December 03rd, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಂಸತ್ತಿನ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 26th, 11:01 am

ಗೌರವಾನ್ವಿತ ರಾಷ್ಟ್ರಪತಿಗಳೇ, ಉಪ ರಾಷ್ಟ್ರಪತಿಗಳೇ, ಸ್ಪೀಕರ್ ಅವರೇ ಮತ್ತು ವೇದಿಕೆಯಲ್ಲಿರುವ ಎಲ್ಲಾ ಹಿರಿಯ ಗಣ್ಯರೇ ಮತ್ತು ಸದನದಲ್ಲಿ ಹಾಜರಿರುವ ಸಂವಿಧಾನಕ್ಕೆ ಬದ್ದರಾಗಿರುವ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ,

ಸಂಸತ್ತಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ

November 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಘನತೆವೆತ್ತ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ಲೋಕಸಭಾ ಸ್ಪೀಕರ್ ಮಾತನಾಡಿದರು. ತಮ್ಮ ಭಾಷಣದ ನಂತರ ಘನತೆವೆತ್ತ ರಾಷ್ಟ್ರಪತಿಗಳು, ಸಂವಿಧಾನದ ಪೀಠಿಕೆಯನ್ನು ಓದುವ ನೇರ ಕಾರ್ಯಕ್ರಮದಲ್ಲಿ ರಾಷ್ಟ್ರದ ಜೊತೆಗೂಡಿದರು. ಗೌರವಾನ್ವಿತ ರಾಷ್ಟ್ರಪತಿಗಳು ಸಂವಿಧಾನ ಸಭೆಯ ಚರ್ಚೆಗಳ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಭಾರತ ಸಂವಿಧಾನದ ಕ್ಯಾಲಿಗ್ರಾಫ್ ಮಾಡಿದ ಡಿಜಿಟಲ್ ಆವೃತ್ತಿ ಮತ್ತು ಈವರೆಗಿನ ಎಲ್ಲ ತಿದ್ದುಪಡಿಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ಪರಿಷ್ಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಅಲ್ಲದೆ, ಅವರು ‘ಸಾಂವಿಧಾನಿಕ ಪ್ರಜಾಪ್ರಭುತ್ವ ಕುರಿತಾದ ಆನ್ ಲೈನ್ ಕ್ವಿಜ್ ‘ಗೂ ಚಾಲನೆ ನೀಡಿದರು.

PM pays tributes to Dr. Rajendra Prasad on his Jayanti

December 03rd, 10:39 am

Prime Minister, Shri Narendra Modi has paid tributes to the first President of India, Dr. Rajendra Prasad, on his Jayanti.