ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ

July 26th, 11:30 am

Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ

June 28th, 11:30 am

‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 02nd, 03:45 pm

ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

May 02nd, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 28th, 10:45 am

ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್‌, ಗುಜರಾತ್‌ ರಾಜ್ಯಪಾಲ ಆಚಾರ್ಯ ದೇವವ್ರತ್‌ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್‌ ಸಿಂಗ್‌ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್‌. ಜೈಶಂಕರ್‌ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್‌, ಸ್ಪೇನ್‌ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್‌ ಬಸ್‌ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು

October 28th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್‌ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.

ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ಯೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟಕ್ಕೆ ಮಿಷನ್ ದಿವ್ಯಾಸ್ತ್ರಕ್ಕೆ ಪ್ರಧಾನಮಂತ್ರಿ ಶ್ಲಾಘನೆ.

March 11th, 06:56 pm

ಸ್ವತಂತ್ರವಾಗಿ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಿಆರ್‌ಡಿಒ ವಿಜ್ಞಾನಿಗಳನ್ನು ಶ್ಲಾಘಿಸಿದರು.

ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

January 28th, 11:30 am

ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.

Aatmanirbharta in Defence: India First Soars as PM Modi Takes Flight in LCA Tejas

November 28th, 03:40 pm

Prime Minister Narendra Modi visited Hindustan Aeronautics Limited (HAL) in Bengaluru today, as the state-run plane maker experiences exponential growth in manufacturing prowess and export capacities. PM Modi completed a sortie on the Indian Air Force's multirole fighter jet Tejas.

ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ

November 25th, 01:07 pm

ನಂತರ ತಮ್ಮ ಅನುಭವವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, “ತೇಜಸ್‌ನಲ್ಲಿ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ಬಹಳ ವಿಶೇಷವಾಗಿತ್ತು. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಇನ್ನಷ್ಟು ಹೆಚ್ಚಿಸಿತು. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಒಂದು ರೀತಿಯ ಹೆಮ್ಮೆ ಮತ್ತು ಹೊಸ ಆಶಾವಾದ ನೀಡಿತು.'' ಎಂದು ಬರೆದುಕೊಂಡಿದ್ದಾರೆ.

ಐಎನ್ಎಸ್ ವಿಕ್ರಾಂತ್ 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ: ಪ್ರಧಾನಿ ಮೋದಿ

September 02nd, 01:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.

ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ

September 02nd, 09:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.

ಹರ್ ಘರ್ ತಿರಂಗಾ ಆಂದೋಲನ ಕುರಿತಂತೆ ಉತ್ಸಾಹದ ದೃಷ್ಟಾಂತಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

August 14th, 02:34 pm

ದೇಶಾದ್ಯಂತ ಹರ್ ಘರ್ ತಿರಂಗಾ ಆಂದೋಲನವನ್ನು ಆಚರಿಸಿದ ವಿವಿಧ ಉದಾಹರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಎನ್ಐಐಒ ವಿಚಾರ ಸಂಕಿರಣ 'ಸ್ವಾವಲಂಬನ್'ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

July 18th, 04:31 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಅಜಯ್ ಭಟ್ ಜೀ, ನೌಕಾ ಸಿಬ್ಬಂದಿ ಮುಖ್ಯಸ್ಥರು, ನೌಕಾಪಡೆಯ ಉಪ ಮುಖ್ಯಸ್ಥರು, ರಕ್ಷಣಾ ಕಾರ್ಯದರ್ಶಿಗಳು, ಎಸ್.ಐ.ಡಿ.ಎಂ.ನ ಅಧ್ಯಕ್ಷರು, ಕೈಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಸಹೋದ್ಯೋಗಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಎನ್ಐಐಒ ವಿಚಾರಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 18th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೌಕಾಪಡೆಯ ಆವಿಷ್ಕಾರ(ಅನುಶೋಧನೆ) ಮತ್ತು ಸ್ವದೇಶೀಕರಣ ಸಂಸ್ಥೆ (ಎನ್ಐಐಒ) ಆಯೋಜಿಸಿದ್ದ 'ಸ್ವಾವಲಂಬನ್' ವಿಚಾರಸಂಕಿರಣದಲ್ಲಿ ಮಾತನಾಡಿದರು.

“ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರ ಭಾರತ-ಕಾರ್ಯಾನುಷ್ಟಾನಕ್ಕೆ ಕರೆ” ಕುರಿತಂತೆ ಬಜೆಟ್ ಬಳಿಕದ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

February 25th, 02:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಮಾಡಿದ ಘೋಷಣೆ ಮಾಡಿದ ಅಂಶಗಳ ಕುರಿತಾದ ‘ರಕ್ಷಣೆಯಲ್ಲಿ ಆತ್ಮನಿರ್ಭರ ಭಾರತ – ಕ್ರಮ ಕೈಗೊಳ್ಳಲು ಕರೆ’ ಎಂಬ ಶೀರ್ಷಿಕೆಯ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ರಕ್ಷಣಾ ಸಚಿವಾಲಯವು ಈ ವೆಬಿನಾರ್ ಅನ್ನು ಆಯೋಜಿಸಿತ್ತು. ಪ್ರಧಾನಮಂತ್ರಿಯವರು ಮಾತನಾಡಿದ ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯ ನಾಲ್ಕನೇ ವೆಬಿನಾರ್ ಇದಾಗಿದೆ.

ರಕ್ಷಣಾ ವಲಯದ ಬಜೆಟ್ ನಂತರದ ವೆಬಿನಾರ್ ಕುರಿತು ಪ್ರಧಾನಿ ಭಾಷಣ

February 25th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಮಾಡಿದ ಘೋಷಣೆ ಮಾಡಿದ ಅಂಶಗಳ ಕುರಿತಾದ ‘ರಕ್ಷಣೆಯಲ್ಲಿ ಆತ್ಮನಿರ್ಭರ ಭಾರತ – ಕ್ರಮ ಕೈಗೊಳ್ಳಲು ಕರೆ’ ಎಂಬ ಶೀರ್ಷಿಕೆಯ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ರಕ್ಷಣಾ ಸಚಿವಾಲಯವು ಈ ವೆಬಿನಾರ್ ಅನ್ನು ಆಯೋಜಿಸಿತ್ತು. ಪ್ರಧಾನಮಂತ್ರಿಯವರು ಮಾತನಾಡಿದ ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯ ನಾಲ್ಕನೇ ವೆಬಿನಾರ್ ಇದಾಗಿದೆ.

ಮಣಿಪುರ ಮತ್ತು ತ್ರಿಪುರಾಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ

January 02nd, 03:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜನವರಿ 4 ರಂದು ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿ ಅವರು ಇಂಫಾಲದಲ್ಲಿ 4800 ರೂ.ಗಿಂತ ಹೆಚ್ಚಿನ ಮೌಲ್ಯದ 22 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ, ಅಗರ್ತಲಾದಲ್ಲಿ ಅವರು, ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಎರಡು ಪ್ರಮುಖ ಅಭಿವೃದ್ಧಿ ಉಪಕ್ರಮಗಳನ್ನು ಪ್ರಾರಂಭಿಸುತ್ತಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 05:39 pm

ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.