'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.2025ರ ಏಷ್ಯಾ ಕಪ್‌ನಲ್ಲಿ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
September 29th, 12:30 am
2025ರ ಏಷ್ಯಾ ಕಪ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ದುಬೈನ ರಾಜಕುಮಾರ, ಯುಎಇ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವರನ್ನು ಪ್ರಧಾನಮಂತ್ರಿ ಬರಮಾಡಿಕೊಂಡರು
April 08th, 05:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಬೈನ ರಾಜಕುಮಾರ, ಯುಎಇ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವರಾದ ಘನತೆವೆತ್ತ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಬರಮಾಡಿಕೊಂಡರು.ಮುದ್ರಾ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
April 08th, 01:03 pm
ಪ್ರಧಾನಮಂತ್ರಿ ಮುದ್ರಾ ಯೋಜನೆಗೆ 10 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಮುದ್ರಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಅವರು ಹಾಜರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಅತಿಥಿಗಳನ್ನು ಸ್ವಾಗತಿಸುವ ಸಾಂಸ್ಕೃತಿಕ ಮಹತ್ವ ಮತ್ತು ಮನೆಯಲ್ಲಿ ಅವರ ಉಪಸ್ಥಿತಿಯು ತರುವ ಪಾವಿತ್ರ್ಯವನ್ನು ಒತ್ತಿ ಹೇಳಿದರು. ಭಾಗವಹಿಸುವವರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಅವರು ಆಹ್ವಾನಿಸಿದರು. ಸಾಕುಪ್ರಾಣಿ ಸರಬರಾಜು, ಔಷಧಿ ಮತ್ತು ಸೇವೆಗಳ ಉದ್ಯಮಿಯಾಗಿ ಬದಲಾದ ಫಲಾನುಭವಿಯೊಂದಿಗೆ ಶ್ರೀ ಮೋದಿ ಅವರು ಸಂವಾದ ನಡೆಸುತ್ತಾ, ಸವಾಲಿನ ಸಮಯದಲ್ಲಿ ತಮ್ಮ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟವರಿಗೆ ಕೃತಜ್ಞತೆ ವ್ಯಕ್ತಪಡಿಸುವ ಮಹತ್ವವನ್ನು ಒತ್ತಿ ಹೇಳಿದರು. ಸಾಲ ಮಂಜೂರು ಮಾಡಿದ ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ಸಾಲದಿಂದ ಆಗಿರುವ ಪ್ರಗತಿಯನ್ನು ತೋರಿಸುವಂತೆ ಅವರು ಫಲಾನುಭವಿಗೆ ತಿಳಿಸಿದರು. ಇಂತಹ ಕ್ರಮಗಳು ಅವರ ನಂಬಿಕೆಯನ್ನು ದೃಢೀಕರಿಸುವುದಲ್ಲದೆ, ದೊಡ್ಡ ಕನಸು ಕಾಣುವ ಧೈರ್ಯವಿರುವ ವ್ಯಕ್ತಿಗಳನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳುವಲ್ಲಿ ವಿಶ್ವಾಸವನ್ನು ತುಂಬುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಅವರ ಬೆಂಬಲದಿಂದ ಬಂದ ಫಲಿತಾಂಶಗಳನ್ನು ಪ್ರದರ್ಶಿಸುವುದರಿಂದ ಬೆಳವಣಿಗೆ ಮತ್ತು ಯಶಸ್ಸನ್ನು ಉತ್ತೇಜಿಸುವಲ್ಲಿ ತಮ್ಮ ಕೊಡುಗೆಯ ಬಗ್ಗೆ ಅವರು ನಿಸ್ಸಂದೇಹವಾಗಿ ಹೆಮ್ಮೆ ಪಡುವಂತೆ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ
February 14th, 03:49 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಫೆಬ್ರವರಿ 14ರಂದು ಯುಎಇ ಉಪಾಧ್ಯಕ್ಷರು, ಪ್ರಧಾನ ಮಂತ್ರಿಗಳು, ರಕ್ಷಣಾ ಸಚಿವರು ಹಾಗೂ ದುಬೈಯ ಪ್ರಮುಖ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ದುಬೈನ ಜೆಬೆಲ್ ಅಲಿಯಲ್ಲಿ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಮೂಲಕ ಶಂಕುಸ್ಥಾಪನೆ
February 14th, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ದುಬೈನ ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು 14 ಫೆಬ್ರವರಿ 2024 ರಂದು ದುಬೈನ ಜೆಬೆಲ್ ಅಲಿ ಮುಕ್ತ ವ್ಯಾಪಾರ ವಲಯದಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು.ದುಬೈ 2024 ನಡೆದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
February 14th, 02:55 pm
ದುಬೈನಲ್ಲಿ ಜರುಗಿದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಅಧ್ಯಕ್ಷ ಶ್ರೀ ಆಂಡ್ರಿ ರಾಜೋಲಿನಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 14th, 02:30 pm
ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ವಿಶೇಷವಾಗಿ ಎರಡನೇ ಬಾರಿಗೆ ಮುಖ್ಯ ಭಾಷಣ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ದೊಡ್ಡ ಗೌರವವಾಗಿದೆ. ಈ ಆಮಂತ್ರಣವನ್ನು ನೀಡಿದ್ದಕ್ಕಾಗಿ ಮತ್ತು ಅಂತಹ ಆತ್ಮೀಯ ಸ್ವಾಗತವನ್ನು ನೀಡಿದ್ದಕ್ಕಾಗಿ ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ರಶೀದ್ ಜಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಗೌರವಾನ್ವಿತ ಸಹೋದರ , ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಹಲವಾರು ಸಂದರ್ಭಗಳಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ದೂರ ದೃಷ್ಟಿಕೋನ ಹೊಂದಿರುವ ನಾಯಕ ಮಾತ್ರವಲ್ಲದೆ ನಿರ್ಣಯ ಮತ್ತು ಬದ್ಧತೆಯ ನಾಯಕರೂ ಕೂಡಾ ಹೌದು.ವಿಶ್ವ ಸರ್ಕಾರಗಳ ಶೃಂಗಸಭೆ 2024 ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
February 14th, 02:09 pm
ಯು.ಎ.ಇ. ಉಪಾಧ್ಯಕ್ಷ, ಪ್ರಧಾನಮಂತ್ರಿ, ರಕ್ಷಣಾ ಸಚಿವರು ಮತ್ತು ದುಬೈ ಆಡಳಿತಗಾರರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 14 ಫೆಬ್ರವರಿ 2024 ರಂದು ದುಬೈನಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಶೃಂಗಸಭೆಯಲ್ಲಿ ಭವಿಷ್ಯದ ಸರ್ಕಾರಗಳನ್ನು ರೂಪಿಸುವುದು ವಿಷಯದ ಕುರಿತು ಅವರು ಪ್ರಧಾನ ಅಧಿವೇಶನದಲ್ಲಿ ವಿಶೇಷ ಭಾಷಣವನ್ನು ಮಾಡಿದರು. 2018 ರಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪ್ರಧಾನಮಂತ್ರಿಯವರು ಭಾಗವಹಿಸಿದ್ದರು. ಈ ಬಾರಿಯ ಶೃಂಗಸಭೆಯಲ್ಲಿ 10 ರಾಷ್ಟ್ರಾಧ್ಯಕ್ಷರು ಮತ್ತು 10 ದೇಶಗಳ ಪ್ರಧಾನಮಂತ್ರಿಗಳು ಸೇರಿದಂತೆ 20 ವಿಶ್ವ ನಾಯಕರು ಭಾಗವಹಿಸಿದ್ದಾರೆ. ಈ ಜಾಗತಿಕ ಕೂಟದಲ್ಲಿ 120 ದೇಶಗಳ ಸರ್ಕಾರಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿ ಪ್ರತಿನಿಧಿಸಿದ್ದಾರೆ.ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಸ್ವೀಡನ್ ಸಾಮ್ರಾಜ್ಯದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 08:32 pm
ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ, ವ್ಯಾಪಾರ ಮತ್ತು ಹೂಡಿಕೆ ಮತ್ತು ಹವಾಮಾನ ಸಹಕಾರ ಸೇರಿದಂತೆ ತಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ನಾಯಕರು ಫಲಪ್ರದ ಚರ್ಚೆ ನಡೆಸಿದರು. ಇಯು, ನಾರ್ಡಿಕ್ ಕೌನ್ಸಿಲ್ ಮತ್ತು ನಾರ್ಡಿಕ್ ಬಾಲ್ಟಿಕ್ 8 ಗ್ರೂಪ್ ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದರು.ಸಿಒಪಿ-28ರಲ್ಲಿ ಕೈಗಾರಿಕಾ ಪರಿವರ್ತನೆಗಾಗಿ ನಾಯಕತ್ವ ಗುಂಪಿನ ಎರಡನೇ ಹಂತಕ್ಕೆ ಭಾರತ ಮತ್ತು ಸ್ವೀಡನ್ ಜಂಟಿಯಾಗಿ ಆತಿಥ್ಯ ವಹಿಸಿವೆ
December 01st, 08:29 pm
ಭಾರತ ಮತ್ತು ಸ್ವೀಡನ್ ಉದ್ಯಮ ಪರಿವರ್ತನೆ ವೇದಿಕೆಯನ್ನು ಸಹ ಪ್ರಾರಂಭಿಸಿವೆ, ಇದು ಎರಡೂ ದೇಶಗಳ ಸರ್ಕಾರಗಳು, ಕೈಗಾರಿಕೆಗಳು, ತಂತ್ರಜ್ಞಾನ ಪೂರೈಕೆದಾರರು, ಸಂಶೋಧಕರು ಮತ್ತು ಚಿಂತಕರ ಚಾವಡಿಗಳನ್ನು ಸಂಪರ್ಕಿಸುತ್ತದೆ.ಸಿಒಪಿ-28 ಅಧ್ಯಕ್ಷೀಯ ಅಧಿವೇಶನ ಕಲಾಪದಲ್ಲಿ “ಹವಾಮಾನ ಬದಲಾವಣೆಗೆ ಹಣಕಾಸು ಪರಿವರ್ತನೆ” ವಿಷಯ ಕುರಿತು ಪ್ರಧಾನ ಮಂತ್ರಿ ಭಾಷಣ
December 01st, 08:06 pm
ಹವಾಮಾನ ಬದಲಾವಣೆಯ ವಿಷಯದಲ್ಲಿ ಭಾರತ ಸೇರಿದಂತೆ ಜಾಗತಿಕ ದಕ್ಷಿಣ ಭಾಗದ ಎಲ್ಲಾ ದೇಶಗಳ ಪಾತ್ರವು ತುಂಬಾ ಕಡಿಮೆ ಎಂಬುದು ನಮಗೆಲ್ಲರಿಗೂ ತಿಳಿದಿದೆ.ಸ್ವಿಸ್ ಒಕ್ಕೂಟದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಸಭೆ
December 01st, 08:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರೊಂದಿಗೆ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಶ್ರೀ ಅಲೈನ್ ಬರ್ಸೆಟ್ ದ್ವಿಪಕ್ಷೀಯ ಸಭೆ ನಡೆಸಿದರು. , 1 ಡಿಸೆಂಬರ್ 2023 ರಂದು, ದುಬೈನಲ್ಲಿ COP 28ರ ನೇಪಥ್ಯದಲ್ಲಿ ಈ ಸಭೆ ನಡೆಸಿದರು.ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ
December 01st, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 1 ಡಿಸೆಂಬರ್ 2023 ರಂದು ಯುಎಇಯಲ್ಲಿ COP-28 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಹವಾಮಾನ ಬದಲಾವಣೆಯ ಸಿಒಪಿ-28 ಶೃಂಗದ “ಕೈಗಾರಿಕಾ ಪರಿವರ್ತನೆಗೆ ನಾಯಕತ್ವ ಗುಂಪು” ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 01st, 07:29 pm
ನಾವೆಲ್ಲರೂ ಸಾಮಾನ್ಯ ಬದ್ಧತೆ ಪ್ರದರ್ಶಿವು ಕಾರಣಕ್ಕಾಗಿ ಇಲ್ಲಿ ಸಂಪರ್ಕಿಸಿದ್ದೇವೆ – ಜಾಗತಿಕ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ತರುವ ಗುರಿಗಳನ್ನು ಸಾಧಿಸಲು ಸರ್ಕಾರ ಮತ್ತು ಉದ್ಯಮದ ನಡುವಿನ ಪಾಲುದಾರಿಕೆ ಬಹಳ ಮುಖ್ಯವಾಗಿದೆ.ಹವಾಮಾನ ಶೃಂಗಸಭೆಯಲ್ಲಿ (ಸಿಒಪಿ-28) 'ಗ್ರೀನ್ ಕ್ರೆಡಿಟ್ಸ್ ಕಾರ್ಯಕ್ರಮʼ ಕುರಿತ ಉನ್ನತ ಮಟ್ಟದ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಪಠ್ಯಾಂತರ
December 01st, 07:22 pm
ಈ ವಿಶೇಷ ಕಾರ್ಯಕ್ರಮಕ್ಕೆ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಸ್ವಾಗತ.ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಪ್ರಧಾನ ಮಂತ್ರಿ ಸಭೆ
December 01st, 06:45 pm
ಭಾರತದ G20 ಪ್ರೆಸಿಡೆನ್ಸಿ ಅವಧಿಯಲ್ಲಿ UNSG ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಧನ್ಯವಾದಗಳನ್ನು ತಿಳಿಸಿದರು. ಹವಾಮಾನ ಗುರಿಗಳನ್ನು ಸಾಧಿಸುವಲ್ಲಿ ಭಾರತದ ಉಪಕ್ರಮಗಳು ಮತ್ತು ಪ್ರಗತಿಯನ್ನು ಅವರು ವಿವರಿಸಿದರು.ಇಸ್ರೇಲ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
December 01st, 06:44 pm
ಇಸ್ರೇಲ್ ಹಮಾಸ್ ಸಂಘರ್ಷದ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದರು ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದರು.