ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ
July 13th, 05:02 pm
ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು."ನಾವೆಲ್ಲರೂ #Cheer4India : ಪ್ರಧಾನಿ ಮೋದಿ "
July 13th, 05:01 pm
ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ
July 13th, 05:00 pm
ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರ ಸಂವಾದವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್, ಯುವ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದುತಿ ಚಂದ್ ಗೆ ಪ್ರಧಾನಿ ಅಭಿನಂದನೆ
July 10th, 01:01 pm
ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದುತಿ ಚಂದ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.