ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಗುಜರಾತಿನ ಸೋಮನಾಥದಲ್ಲಿ ಹೊಸ ಪ್ರವಾಸಿ ಬಂಗಲೆ (ಸರ್ಕ್ಯೂಟ್ ಹೌಸ್ ) ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 21st, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಗುಜರಾತ್ನ ಸೋಮನಾಥದಲ್ಲಿ ಹೊಸ ʻಸರ್ಕ್ಯೂಟ್ ಹೌಸ್ʼ ಉದ್ಘಾಟಿಸಿದ ಪ್ರಧಾನಮಂತ್ರಿ
January 21st, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದ್ವಾರಕಾಧೀಶ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ; ದ್ವಾರಕಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ
October 07th, 10:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ದ್ವಾರಕಾದಲ್ಲಿ ದ್ವಾರಕಾಧೀಶ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ತಮ್ಮ ಎರಡು ದಿನಗಳ ಗುಜರಾತ್ ಭೇಟಿಯನ್ನು ಆರಂಭಿಸಿದರು.2017ರ ಅಕ್ಟೋಬರ್ 7 ಮತ್ತು 8ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಿ
October 06th, 05:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2017ರ ಅಕ್ಟೋಬರ್ 7 ಮತ್ತು 8ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ.