ಫೆಬ್ರವರಿ 28 ರಂದು ಗುಜರಾತ್‌ಗೆ ಪ್ರಧಾನಮಂತ್ರಿ ಭೇಟಿ

February 27th, 03:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಫೆಬ್ರವರಿ 28, 2026 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ರ ಸುಮಾರಿಗೆ, ಪ್ರಧಾನಮಂತ್ರಿಗಳು ಸನಂದ್‌ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಅವರು ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.