ಆಗಸ್ಟ್ 25–26 ರಂದು ಗುಜರಾತ್ ಗೆ ಪ್ರಧಾನಮಂತ್ರಿ ಅವರ ಭೇಟಿ
August 24th, 01:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 - 26 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 25 ರಂದು ಸಂಜೆ 6 ಗಂಟೆಗೆ ಅಹಮದಾಬಾದ್ ನ ಖೋಡಲ್ಧಾಮ್ ಮೈದಾನದಲ್ಲಿ ಅವರು 5,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.