Odisha is emerging as a gateway to growth and prosperity in eastern India: PM Modi in Pahadpur
June 20th, 01:10 pm
The President, Smt. Droupadi Murmu and the Prime Minister, Shri Narendra Modi visited Pahadpur village in Mayurbhanj district today. The President and the Prime Minister offered prayers at the sacred groves Santhali Jahera and Ho Jahera, Skill Centre and Pahadpur School. The President and Prime Minister participated in a programme at Rairangpur in Mayurbhanj district, marking the completion of two years of the Government of Odisha. The theme of the programme is “Vikas ra Dhara, Odisha Sara”. Shri Modi inaugurated and laid the foundation stone of various development projects worth over ₹47,600 crore.PM Modi launches development projects at Pahadpur on the completion of two years of the Odisha Government
June 20th, 01:00 pm
PM Modi participated in a programme marking two years of the Odisha Government in Pahadpur village in Mayurbhanj. The PM wished President Murmu on her birthday, praising her dedication to public service, humility, and commitment to nation-building. In his address, he highlighted the state's rapid development and launched development projects worth over ₹47,600 crore. He announced that Pahadpur will be developed as a Solar Village and also highlighted major investments across infrastructure, industry and energy.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 14th, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಪ್ರಧಾನಮಂತ್ರಿ ಅಕ್ಟೋಬರ್ 2 ರಂದು ಜಾರ್ಖಂಡ್‌ಗೆ ಭೇಟಿ
September 30th, 05:09 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2 ಅಕ್ಟೋಬರ್ 2024 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ 83,300 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ.