ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 10:00 am
ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 12th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.Our govt is engaged in enhancing the capabilities of every poor, tribal, dalit & deprived person of country: PM
March 02nd, 03:00 pm
Prime Minister Narendra Modi dedicated to the nation and laid the foundation stone for multiple development projects worth Rs 21,400 crores in Aurangabad, Bihar. Addressing the gathering, the Prime Minister said that a new chapter of Bihar’s development is being written today on the land of Aurangabad which has given birth to many freedom fighters and great personalities such as Bihar Vibhuti Shri Anugrah Narayan.ಬಿಹಾರದ ಔರಂಗಾಬಾದ್ ನಲ್ಲಿ ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
March 02nd, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಔರಂಗಾಬಾದ್ ನಲ್ಲಿ ಇಂದು ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ರಸ್ತೆ, ರೈಲ್ವೆ ಮತ್ತು ನಮಾಮಿ ಗಂಗೆ ಮತ್ತಿತರ ಯೋಜನೆಗಳು ಸೇರಿವೆ. ಪ್ರಧಾನಮಂತ್ರಿ ಅವರು ಫೋಟೋ ಗ್ಯಾಲರಿಯಲ್ಲಿ ಓಡಾಡಿ ವೀಕ್ಷಿಸಿದರು.ಪ್ರಧಾನಿ ಮೋದಿಯವರಿಂದ ಗುಜರಾತ್‌ನ ಕೆವಾಡಿಯಾದಲ್ಲಿ ಆರೋಗ್ಯ ವನ, ಆರೋಗ್ಯ ಕುಟೀರ, ಏಕ್ತಾ ಮಾಲ್ ಮತ್ತು ಮಕ್ಕಳ ಪೌಷ್ಠಿಕಾಂಶ ಉದ್ಯಾನಗಳ ಉದ್ಘಾಟನೆ
October 30th, 03:11 pm
ಗುಜರಾತ್‌ನಲ್ಲಿ ಕೆವಾಡಿಯಾದ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.