ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ
May 08th, 02:17 pm
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸನ್ನದ್ಧತೆ ಮತ್ತು ಅಂತರ-ಸಚಿವಾಲಯಗಳ ಸಮನ್ವಯವನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ಇಂದು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.ಜೂನ್ 18ರಂದು ಕೋವಿಡ್-19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
June 16th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ಸಮಗ್ರ ತರಬೇತಿ ಕಾರ್ಯಕ್ರಮ’ಕ್ಕೆ ಚಾಲನೆ ನೀಡಲಿದ್ದಾರೆ. 26 ರಾಜ್ಯಗಳಲ್ಲಿನ 111 ತರಬೇತಿ ಕೇಂದ್ರಗಳಲ್ಲಿ ಈ ತರಬೇತಿ ಕಾರ್ಯಕ್ರಮ ಆರಂಭವಾಗಲಿದೆ. ತರಬೇತಿಗೆ ಚಾಲನೆ ನೀಡಿದ ನಂತರ ಪ್ರಧಾನಮಂತ್ರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.