ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 389 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
February 14th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ನಿನ್ನೆ ಕೇಂದ್ರ ರೈಲ್ವೆ ಸಚಿವಾಲಯದ ಮೂರು (3) ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. (ಅಂದಾಜು) ವೆಚ್ಚದೊಂದಿಗೆ ಅನುಮೋದಿಸಿದೆ. ಈ ಯೋಜನೆಗಳು ಈ ಕೆಳಗಿನಂತಿವೆ:ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.