ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

July 12th, 11:30 am

ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

July 12th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.