ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 21st, 12:51 pm
ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು
June 21st, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ಭಾರತ-ಆರ್‌ಒಕೆ ಸಮಗ್ರ ಚೌಕಟ್ಟು
April 20th, 10:51 pm
ಏಪ್ರಿಲ್ 20, 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೊರಿಯಾ ಗಣರಾಜ್ಯದ (ROK) ಗೌರವಾನ್ವಿತ ಶ್ರೀ ಲೀ ಜೇ ಮ್ಯುಂಗ್ ಅವರ ನಡುವಿನ ಸಭೆಯಲ್ಲಿ, ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ತಮ್ಮ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ಸಹಕಾರದ ಕುರಿತು ಎರಡೂ ಕಡೆಯವರು ಫಲಪ್ರದ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ಕಲ್ಪಕಂನ ಅಣು ವಿದ್ಯುತ್ ಸ್ಥಾವರದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ ನಿರ್ಣಾಯಕ ಹಂತ ತಲುಪಿದ್ದಕ್ಕೆ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 06th, 10:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಲ್ಪಕಂನ ದೇಸೀಯವಾಗಿ ಅಭಿವೃದ್ಧಿಪಡಿಸಿರುವ ಪ್ರೋಟೊಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (Prototype Fast Breeder Reactor) – PFBR ನಿರ್ಣಾಯಕ ಹಂತ ತಲುಪಿರುವ ಹಿನ್ನೆಲೆಯಲ್ಲಿ ಅವರು, ಭಾರತದ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ
November 16th, 03:50 pm
ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು
November 16th, 03:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 03:44 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ
October 08th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ
September 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.