ಉತ್ತಮ ಸಹವಾಸ ಮತ್ತು ಬುದ್ಧಿವಂತ ಸಲಹೆಯನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

August 25th, 11:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತಮ ಸಹವಾಸ ಮತ್ತು ಬುದ್ಧಿವಂತ ಸಲಹೆಯ ಸದ್ಗುಣವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಬುದ್ಧಿವಂತರ ಒಡನಾಟ, ಉದಾತ್ತ ಸಂವಾದ ಮತ್ತು ನಿಸ್ವಾರ್ಥ ಸ್ನೇಹವು ತೃಪ್ತಿಕರ ಮತ್ತು ಶಾಂತಿಯುತ ಜೀವನಕ್ಕೆ ಅಗತ್ಯವಾದ ಅಡಿಪಾಯಗಳಾಗಿವೆ ಎಂಬುದನ್ನು ಈ ಸಂದೇಶವು ಸಾರ್ವಕಾಲಿಕವಾಗಿ ನೆನಪಿಸುತ್ತದೆ:

Prime Minister shares Sanskrit Subhashitam highlighting the values of compassion and contentment

August 24th, 08:08 am

PM Modi shared a Sanskrit Subhashitam highlighting how compassion, contentment, effort and determination help build self-respect, overcome greed and laziness, and achieve greater fulfilment. He noted that these values also strengthen the bonds of cooperation and harmony in society.

370 ಮತ್ತು 35(A) ವಿಧಿಗಳ ರದ್ದತಿಯ ಏಳು ವರ್ಷಗಳು.

August 05th, 02:25 pm

370 ಮತ್ತು 35(A) ವಿಧಿಗಳನ್ನು ಐತಿಹಾಸಿಕವಾಗಿ ರದ್ದುಗೊಳಿಸಿ ಭಾರತ ಏಳು ವರ್ಷಗಳನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಕಳೆದ ಏಳು ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಪರಿವರ್ತನೆಗೆ ಸಾಕ್ಷಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಗಮನಿಸಿದರು. ರಾಷ್ಟ್ರೀಯ ಏಕತೆಗೆ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜೀವಮಾನದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು ಮತ್ತು ವಿಕ್ಷಿತ ಭಾರತಕ್ಕೆ ಪ್ರತಿಯೊಬ್ಬ ನಾಗರಿಕರ ಕೊಡುಗೆಯನ್ನು ಒತ್ತಿ ಹೇಳಿದರು.

ಚಾರ್ಟರ್ಡ್ ಅಕೌಂಟೆಂಟ್ಸ್ ದಿನದಂದು ಚಾರ್ಟರ್ಡ್ ಅಕೌಂಟೆಂಟ್ ಸಮುದಾಯದ ಸಹೋದರರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

July 01st, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಶುಭ ಸಂದರ್ಭದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ. ಚಾರ್ಟರ್ಡ್ ಅಕೌಂಟೆಂಟ್‌ಗಳು ಭಾರತದ ಆರ್ಥಿಕತೆಯಲ್ಲಿ ಸುದೀರ್ಘಕಾಲದಿಂದ ವಿಶ್ವಾಸಾರ್ಹ ಪಾಲುದಾರರಾಗಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದರು. ಪಾರದರ್ಶಕತೆ ಮತ್ತು ವೃತ್ತಿಪರ ಶ್ರೇಷ್ಠತೆಗೆ ತಮ್ಮ ಬದ್ಧತೆಯ ಮೂಲಕ, ಅವರು ದೇಶದ ಹಣಕಾಸು ವ್ಯವಸ್ಥೆಯನ್ನು ಬಲಪಡಿಸಿ, ವ್ಯವಹಾರಗಳನ್ನು ಬೆಂಬಲಿಸಿದ್ದಾರೆ. ಅವರು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ, ಹೂಡಿಕೆದಾರರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

PM marks 11 years of Digital India, says initiative strengthened the foundation of a Viksit Bharat

July 01st, 12:04 pm

Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 19th, 05:15 pm

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.

ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 19th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್‌ ಭಾರತ್‌ ರೋಜ್‌ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.

ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರಧಾನಿ ಮೋದಿ ಫ್ರಾನ್ಸ್‌ಗೆ ಆಗಮಿಸಿದರು

June 13th, 11:19 pm

ಪ್ರಧಾನಿ ಮೋದಿ ತಮ್ಮ ಭೇಟಿಯ ಮೊದಲ ಹಂತವನ್ನು ಆರಂಭಿಸುತ್ತಿದ್ದಂತೆ ಫ್ರಾನ್ಸ್‌ನ ನೈಸ್‌ಗೆ ಆಗಮಿಸಿದರು. ಅವರಿಗೆ ಆಗಮನದ ಸಮಯದಲ್ಲಿ ಆತ್ಮೀಯ ಮತ್ತು ವಿಶೇಷ ಸ್ವಾಗತ ನೀಡಲಾಯಿತು, ಇದು ಭಾರತ ಮತ್ತು ಫ್ರಾನ್ಸ್ ನಡುವಿನ ಬಲವಾದ ಮತ್ತು ಶಾಶ್ವತ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಭೇಟಿಯು ಭಾರತ-ಫ್ರಾನ್ಸ್ ಪಾಲುದಾರಿಕೆಯನ್ನು ಮತ್ತು ವೈವಿಧ್ಯಮಯ ವಲಯಗಳಲ್ಲಿ ಸಹಕಾರವನ್ನು ಮುಂದುವರಿಸುವ ಹಂಚಿಕೆಯ ಬದ್ಧತೆಯನ್ನು ಒತ್ತಿಹೇಳುತ್ತದೆ.

ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರದ ಬಲವಾದ ಉತ್ತೇಜನ ಮತ್ತು ದೃಢವಾದ ನಾವೀನ್ಯತೆ ಪರಿಸರ ವ್ಯವಸ್ಥೆಯ ಬೆಳವಣಿಗೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ

June 13th, 11:44 am

ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ಬಲವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ. ಭಾರತದ ಯುವಕರು ಆತ್ಮವಿಶ್ವಾಸದಿಂದ ತಮ್ಮ ಆಕಾಂಕ್ಷೆಗಳನ್ನು ಬೆನ್ನತ್ತಿರುವುದು ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ನಿರ್ಣಾಯಕ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ.

ವಿಭಿನ್ನ ಕ್ಷೇತ್ರಗಳಲ್ಲಿ ಮಹಿಳೆಯರ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿ

June 12th, 12:39 pm

ಕಳೆದ 12 ವರ್ಷಗಳಲ್ಲಿ ಸರ್ಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಇದು ಎಲ್ಲಾ ವಲಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದ್ದು, ಆರ್ಥಿಕ ಸೇರ್ಪಡೆ ಮತ್ತು ಉದ್ಯಮಶೀಲತೆಯಿಂದ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ವಸತಿ, ಕ್ರೀಡೆ, ವಿಜ್ಞಾನ ಮತ್ತು ಆಡಳಿತದವರೆಗೆ, ಮಹಿಳೆಯರು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ಪ್ರಧಾನಮಂತ್ರಿ ಅವರು ಏಪ್ರಿಲ್ 13 ರಂದು 'ನಾರಿ ಶಕ್ತಿ ವಂದನ ಸಮ್ಮೇಳನ'ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ

April 12th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 13, 2026 ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ 'ನಾರಿ ಶಕ್ತಿ ವಂದನ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

“ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

March 06th, 01:14 pm

ಬಜೆಟ್ ವೆಬಿನಾರ್ ಸರಣಿಯ 3ನೇ ವೆಬಿನಾರ್‌ನಲ್ಲಿ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಸ್ವಾಗತ ಕೋರುತ್ತೇನೆ. ಇದಕ್ಕೂ ಮೊದಲು ತಂತ್ರಜ್ಞಾನ, ಸುಧಾರಣೆಗಳು ಮತ್ತು ಆರ್ಥಿಕ ಬೆಳವಣಿಗೆಯಂತಹ ಪ್ರಮುಖ ವಿಷಯಗಳ ಕುರಿತು 2 ವೆಬಿನಾರ್‌ಗಳನ್ನು ನಡೆಸಲಾಯಿತು. ಇಂದು ಚರ್ಚೆಯು ಗ್ರಾಮೀಣ ಆರ್ಥಿಕತೆ ಮತ್ತು ಕೃಷಿಯಂತಹ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿದೆ. ನೀವೆಲ್ಲರೂ ನಿಮ್ಮ ಅಮೂಲ್ಯ ಸಲಹೆಗಳೊಂದಿಗೆ ಬಜೆಟ್ ತಯಾರಿಕೆಯ ಪ್ರಕ್ರಿಯೆಗೆ ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಸಲಹೆ ಸೂಚನೆಗಳು ಬಜೆಟ್‌ನಲ್ಲಿ ಪ್ರತಿಫಲಿಸುತ್ತಿವೆ, ಅವು ತುಂಬಾ ಉಪಯುಕ್ತವಾಗಿವೆ ಎಂಬುದನ್ನು ನೀವು ಗಮನಿಸಿರಬೇಕು. ಆದರೆ ಈಗ ಬಜೆಟ್ ಮಂಡಿಸಲಾಗಿದೆ, ದೇಶವು ತನ್ನ ಸಂಪೂರ್ಣ ಸಾಮರ್ಥ್ಯ ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ನಿಮ್ಮ ಅನುಭವ, ನಿಮ್ಮ ಸಲಹೆಗಳು ಮತ್ತು ಹೆಚ್ಚಿನ ಸಂಖ್ಯೆಯ ಜನರಿಗೆ ಬಜೆಟ್‌ನ ಪ್ರಯೋಜನಗಳನ್ನು ಗರಿಷ್ಠಗೊಳಿಸಲು ಸರಳ ಮಾರ್ಗಗಳು ಅತ್ಯಗತ್ಯ. ಬಜೆಟ್‌ನಲ್ಲಿ ನಿಗದಿಪಡಿಸಿದ ಪ್ರತಿ ಪೈಸೆಯನ್ನು ಸಂಪೂರ್ಣವಾಗಿ ಮತ್ತು ತ್ವರಿತವಾಗಿ ಹೇಗೆ ಬಳಸಿಕೊಳ್ಳಬಹುದು? ಈ ವೆಬಿನಾರ್‌ನಲ್ಲಿ ನಿಮ್ಮ ಸಲಹೆಗಳು ಸಹ ಅಷ್ಟೇ ಮುಖ್ಯವಾಗಿವೆ.

ಕೃಷಿ ಮತ್ತು ಗ್ರಾಮೀಣ ಪರಿವರ್ತನೆಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

March 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷಿ ಮತ್ತು ಗ್ರಾಮೀಣ ಪರಿವರ್ತನೆ ಕುರಿತಾದ ಬಜೆಟ್ ನಂತರದ ಮೂರನೇ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕುರಿತಾದ ಹಿಂದಿನ ಅಧಿವೇಶನಗಳನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಬಜೆಟ್ ರೂಪಿಸುವ ಸಮಯದಲ್ಲಿ ಪಾಲುದಾರರು ಮೌಲ್ಯಯುತವಾದ ಸಹಕಾರವನ್ನು ನೀಡಿದ್ದಾರೆ ಎಂದು ಹೇಳಿದರು. ಈಗ, ಬಜೆಟ್ ನಂತರ, ದೇಶವು ತನ್ನ ಪೂರ್ಣ ಸಾಮರ್ಥ್ಯದ ಪ್ರಯೋಜನಗಳನ್ನು ಪಡೆಯುವುದು ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಸಲಹೆಗಳು ಮತ್ತು ಈ ವೆಬಿನಾರ್ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ರೀ ಮೋದಿ ಒತ್ತಿಹೇಳಿದರು.

ಮಾರ್ಚ್ 6, 2026 ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ

March 05th, 06:04 pm

ಮಾರ್ಚ್ 6, 2026 ರಂದು ಬೆಳಿಗ್ಗೆ 11:15ಕ್ಕೆ “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಎಂಬ ವಿಷಯದ ಕುರಿತು ಬಜೆಟ್ ನಂತರದ ಮೌಲ್ಯವರ್ಧಿತ ವಿಶ್ಲೇಷಣೆ ಸಂವಾದಗಳ ವಿಶೇಷ ವೆಬಿನಾರ್ ಸರಣಿಕೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ ಮೂಲಕ ಭಾಷಣ ಮಾಡಲಿದ್ದಾರೆ.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

March 02nd, 05:04 pm

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.