ಜಿ20 ಶೃಂಗಸಭೆಯ ಮೊದಲ ಅಧಿವೇಶನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 22nd, 09:36 pm
ಮೊದಲನೆಯದಾಗಿ, ಜಿ20 ಶೃಂಗಸಭೆಯ ಅತ್ಯುತ್ತಮ ಆತಿಥ್ಯ ಮತ್ತು ಯಶಸ್ವಿ ಅಧ್ಯಕ್ಷತೆಗಾಗಿ ಅಧ್ಯಕ್ಷ ರಾಮಫೋಸಾ ಅವರನ್ನು ನಾನು ಅಭಿನಂದಿಸುತ್ತೇನೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 29th, 04:09 pm
ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು
October 29th, 04:08 pm
ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್ ಅಪ್ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
August 29th, 03:59 pm
ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಗುಜರಾತ್ನ ಅಹಮದಾಬಾದ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.