ಇಥಿಯೋಪಿಯಾದ ಅಡಿಸ್ ಅಬಾಬಾದಲ್ಲಿರುವ ಅಡ್ವಾ ವಿಜಯ ಸ್ಮಾರಕದಲ್ಲಿ ಪ್ರಧಾನಮಂತ್ರಿ ಗೌರವ ಸಮರ್ಪಣೆ
December 17th, 01:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದಲ್ಲಿರುವ ಅಡ್ವಾ ವಿಜಯ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು. 1896ರಲ್ಲಿ ಅಡ್ವಾ ಕದನದಲ್ಲಿ ತಮ್ಮ ರಾಷ್ಟ್ರದ ಸಾರ್ವಭೌಮತ್ವಕ್ಕಾಗಿ ಪರಮೋಚ್ಛ ತ್ಯಾಗ ಮಾಡಿದ ಧೈರ್ಯಶಾಲಿ ಇಥಿಯೋಪಿಯನ್ ಸೈನಿಕರಿಗೆ ಈ ಸ್ಮಾರಕವನ್ನು ಸಮರ್ಪಿಸಲಾಗಿದೆ. ಈ ಸ್ಮಾರಕವು ಅಡ್ವಾ ವೀರರ ನಿರಂತರ ಚೈತನ್ಯ ಮತ್ತು ದೇಶದ ಹೆಮ್ಮೆಯ ಸ್ವಾತಂತ್ರ್ಯ, ಘನತೆ ಮತ್ತು ಸ್ಥಿತಿಸ್ಥಾಪಕತ್ವದ ಪರಂಪರೆಗೆ ಸಲ್ಲುವ ಗೌರವವಾಗಿದೆ.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರದಾನದ ನಂತರ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 17th, 09:25 am
ಇಂದು ಇಥಿಯೋಪಿಯಾದ ಈ ಭವ್ಯ ನಾಡಿನಲ್ಲಿ, ನಿಮ್ಮೆಲ್ಲರ ನಡುವೆ ಇರುವುದು ನನಗೆ ದೊರೆತ ಸೌಭಾಗ್ಯವಾಗಿದೆ. ನಾನು ಇಂದು ಮಧ್ಯಾಹ್ನವಷ್ಟೇ ಇಥಿಯೋಪಿಯಾಗೆ ಆಗಮಿಸಿದೆ. ಇಲ್ಲಿಗೆ ಕಾಲಿಟ್ಟ ಕ್ಷಣದಿಂದಲೇ, ಇಲ್ಲಿನ ಜನರಿಂದ ಅಪಾರವಾದ ಪ್ರೀತಿ ಮತ್ತು ಅನ್ಯೋನ್ಯತೆಯನ್ನು ನಾನು ಅನುಭವಿಸಿದ್ದೇನೆ. ಸ್ವತಃ ಪ್ರಧಾನ ಮಂತ್ರಿಗಳೇ ವಿಮಾನ ನಿಲ್ದಾಣಕ್ಕೆ ಬಂದು ನನ್ನನ್ನು ಬರಮಾಡಿಕೊಂಡರು ಹಾಗೂ ನನ್ನನ್ನು 'ಫ್ರೆಂಡ್ಶಿಪ್ ಪಾರ್ಕ್' ಮತ್ತು 'ವಿಜ್ಞಾನ ವಸ್ತುಸಂಗ್ರಹಾಲಯ'ಕ್ಕೆ ಕರೆದೊಯ್ದರು.India and Ethiopia have shared continuous contact, dialogue and exchanges for thousands of years: PM Modi during meeting with Ethiopian PM Abiy Ahmed Ali
December 17th, 09:12 am
During his remarks at the meeting with Ethiopian PM Abiy Ahmed Ali, PM Modi announced that India–Ethiopia relations have been elevated to the level of a Strategic Partnership. The PM noted that both countries are democratic forces committed to peace and the welfare of humanity. He also expressed satisfaction over the decision to double the number of student scholarships for Ethiopia in India.ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ
December 17th, 12:02 am
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಮಂತ್ರಿ
December 16th, 11:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 16ರಿಂದ 17ರವರೆಗೆ ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿ ಕೈಗೊಂಡರು. ಇಂದು ಅಡಿಸ್ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ಲ್ಲಿ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ, ಇಥಿಯೋಪಿಯಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರು ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಹಾಗೂ ಜಾಗತಿಕ ರಾಜಕಾರಣಿಯಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿಯಾದ 'ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ಅನ್ನು ಪ್ರದಾನ ಮಾಡಿದರು.ಫಲಿತಾಂಶಗಳ ಪಟ್ಟಿ: ಇಥಿಯೋಪಿಯಾಕ್ಕೆ ಪ್ರಧಾನಮಂತ್ರಿ ಭೇಟಿ
December 16th, 10:41 pm
'ಕಾರ್ಯತಂತ್ರದ ಪಾಲುದಾರಿಕೆ'ಗೆ ದ್ವಿಪಕ್ಷೀಯ ಸಂಬಂಧಗಳ ಉನ್ನತೀಕರಣಇಥಿಯೋಪಿಯಾಗೆ ಪ್ರಧಾನಮಂತ್ರಿ ಆಗಮನ - ಭವ್ಯ ಸ್ವಾಗತ
December 16th, 06:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಥಿಯೋಪಿಯಾಗೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಾಗಿ ಅಡಿಸ್ ಅಬಾಬಾ ತಲುಪಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರಿಗೆ ವಿಶೇಷ ಅಭಿವ್ಯಕ್ತಿಯೊಂದಿಗೆ ಇಥಿಯೋಪಿಯಾದ ಪ್ರಧಾನಮಂತ್ರಿ ಡಾ. ಅಬಿಯ್ ಅಹ್ಮದ್ ಅಲಿ ಅವರು ಆತ್ಮೀಯ ಮತ್ತು ವರ್ಣಮಯ ಸ್ವಾಗತ ನೀಡಿದರು.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
December 15th, 08:15 am
ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ
December 11th, 08:43 pm
ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಬ್ರಿಕ್ಸ್-ಆಫ್ರಿಕಾ ಔಟ್ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಪ್ರಧಾನಮಂತ್ರಿ
August 25th, 12:12 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್-ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಭಾಗವಹಿಸಿದರು.ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
August 24th, 11:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅಲಿ ಅವರನ್ನು ಭೇಟಿ ಮಾಡಿದರು.ʻಬ್ರಿಕ್ಸ್-ಆಫ್ರಿಕಾ ಔಟ್ರೀಚ್ʼ ಮತ್ತು ʻಬ್ರಿಕ್ಸ್ ಪ್ಲಸ್ʼ ಸಂವಾದದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಅನುವಾದ
August 24th, 02:38 pm
ಆಫ್ರಿಕಾದ ನೆಲದಲ್ಲಿ, ನನ್ನೆಲ್ಲಾ ಸ್ನೇಹಿತರ ನಡುವೆ ಇಲ್ಲಿರುವುದು ನನಗೆ ಸಂತೋಷ ತಂದಿದೆ.Phone call between Prime Minister Shri Narendra Modi and H.E. Dr. Abiy Ahmed Ali, Prime Minister of Federal Democratic Republic of Ethiopia
May 06th, 07:08 pm
PM Narendra Modi had a phone call with H.E. Dr. Abiy Ahmed Ali, Prime Minister of the Federal Democratic Republic of Ethiopia. The two leaders discussed the domestic, regional and global challenges posed by the COVID-19 pandemic, and expressed solidarity with each other during the health crisis.