ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 27th, 01:30 pm

ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.

ಸೈಪ್ರಸ್ ಮತ್ತು ಭಾರತ ನಡುವಿನ ಸಮಗ್ರ ಪಾಲುದಾರಿಕೆ ಅನುಷ್ಠಾನದ ಕುರಿತು ಜಂಟಿ ಘೋಷಣೆ

June 16th, 03:20 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು, 2025ರ ಜೂನ್ 15 ರಿಂದ 16 ರವರೆಗೆ ಸೈಪ್ರಸ್‌ಗೆ ಅಧಿಕೃತ ಭೇಟಿ ನೀಡಿದ ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಎರಡು ದಶಕಗಳ ಬಳಿಕ, ಭಾರತದ ಪ್ರಧಾನಿಯೊಬ್ಬರು ಸೈಪ್ರಸ್‌ ಗೆ ನೀಡಿದ ಈ ಭೇಟಿಯು, ಉಭಯ ರಾಷ್ಟ್ರಗಳ ನಡುವಿನ ಗಾಢ ಮತ್ತು ಶಾಶ್ವತ ಸ್ನೇಹವನ್ನು ಪುನರುಚ್ಚರಿಸುವ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಭೇಟಿಯು, ಕೇವಲ ಸಮಾನ ಇತಿಹಾಸದ ಆಚರಣೆಯಾಗಿರದೆ, ಜಂಟಿ ವ್ಯೂಹಾತ್ಮಕ ದೃಷ್ಟಿ, ಪರಸ್ಪರ ನಂಬಿಕೆ ಮತ್ತು ಗೌರವದ ತಳಹದಿಯ ಮೇಲೆ ನಿಂತಿರುವ ಭವಿಷ್ಯದ ಪಾಲುದಾರಿಕೆಯ ಸಂಕೇತವಾಗಿದೆ.