ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಜನವರಿ 12ರಂದು ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ

January 10th, 09:21 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತದಾದ್ಯಂತದ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.