ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ
June 06th, 06:22 pm
ಪಂಜಾಬ್ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.ಜನವರಿ 5ರಂದು ಪಂಜಾಬ್‌ಗೆ ಭೇಟಿ ನೀಡಿ, 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿಗಳು
January 03rd, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜನವರಿ 2022ರಂದು ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್ ವೇ; ಅಮೃತಸರ- ಉನಾ ವಿಭಾಗದ ರಸ್ತೆಯನ್ನು ಚತುಷ್ಪಥವನ್ನಾಗಿ ಉನ್ನತೀಕರಿಸಲಾಗುವುದು; ಮುಖೆರಿಯನ್- ತಲ್ವಾರಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ; ಫಿರೋಜ್‌ಪುರದ ಪಿಜಿಐ ಉಪಗ್ರಹ ಕೇಂದ್ರ ಹಾಗೂ ಕಪುರ್‌ತಲಾ ಮತ್ತು ಹೋಶಿಯಾರ್‌ಪುರದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ಸೇರಿವೆ.PM Modi celebrates Diwali with Soldiers
November 11th, 05:02 pm