2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
December 29th, 03:38 pm
ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿಗೆ ಪ್ರಧಾನಮಂತ್ರಿ ಅಭಿನಂದನೆ
December 29th, 03:35 pm
ದೋಹಾದಲ್ಲಿ ನಡೆದ 2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಆಟದ ಬಗ್ಗೆ ಅವರ ಸಮರ್ಪಣೆ ಶ್ಲಾಘನೀಯ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.