ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ
June 10th, 11:50 pm
ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ ಲ್ಯಾಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿಯವರ ಸಭೆ
May 19th, 06:42 pm
2026ರ ಮೇ 19 ರಂದು ಓಸ್ಲೋದಲ್ಲಿ ನಡೆದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರನ್ನು ಭೇಟಿಯಾದರು.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
May 15th, 07:56 am
ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.Prime Minister attends Raisina Dialogue 2026
March 05th, 08:31 pm
PM Modi today attended the Raisina Dialogue 2026 in New Delhi. In a post on X, the PM said he listened to the insightful address by Finland President Alexander Stubb, in which he covered a wide range of subjects.ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್ ಜಂಟಿ ಹೇಳಿಕೆ
March 05th, 08:03 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.ಫಿನ್ಲೆಂಡ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
March 05th, 11:55 am
ಫಿನ್ಲೆಂಡ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಸ್ಟಬ್ ಅವರಿಗೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಅಧ್ಯಕ್ಷ ಸ್ಟಬ್ ಅವರು ಪ್ರಸಿದ್ಧ ಜಾಗತಿಕ ನಾಯಕ ಮಾತ್ರವಲ್ಲ, ಗೌರವಾನ್ವಿತ ಚಿಂತಕ ಮತ್ತು ಲೇಖಕರೂ ಆಗಿದ್ದಾರೆ.ಫಿನ್ಲ್ಯಾಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಮಂತ್ರಿ
March 04th, 12:04 pm
ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಫಿನ್ಲ್ಯಾಂಡ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರೊಂದಿಗೆ ಪ್ರಧಾನಮಂತ್ರಿ ಅವರ ಭೇಟಿ
February 18th, 05:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 18, 2026 ರಂದು ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಫಿನ್‌ಲ್ಯಾಂಡ್ ಪ್ರಧಾನಮಂತ್ರಿ
February 18th, 02:04 pm
ಫಿನ್‌ಲ್ಯಾಂಡ್ ಪ್ರಧಾನ ಮಂತ್ರಿಗಳಾದ ಶ್ರೀ ಪೆಟ್ರಿ ಓರ್ಪೋ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಫಿನ್ಲೆಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ದೂರವಾಣಿ ಕರೆ
August 27th, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು
April 16th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.2ನೇ ಭಾರತ-ನಾರ್ಡಿಕ್ ಶೃಂಗಸಭೆ
May 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಫಿನ್‌ಲ್ಯಾಂಡ್ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ
May 04th, 04:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಕೋಪನ್ ಹ್ಯಾಗನ್ನಲ್ಲಿ ಫಿನ್‌ಲ್ಯಾಂಡ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದರು. ಇಬ್ಬರೂ ನಾಯಕರ ನಡುವೆ ನಡೆದ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.ಭಾರತ - ಫಿನ್ ಲ್ಯಾಂಡ್ ನಡುವಿನ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಪ್ರಾಸ್ತಾವಿಕ ಹೇಳಿಕೆಯ ಕನ್ನಡ ಭಾಷಾಂತರ
March 16th, 05:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್ ಲೆಂಡ್ ಗಣರಾಜ್ಯದ ಘನತೆವೆತ್ತ ಪ್ರಧಾನಿ ಸನ್ನಾ ಮರೀನ್ ವರ್ಚುವಲ್ ಶೃಂಗ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಮಗ್ರ ದ್ವಿಪಕ್ಷೀಯ ವಿಷಯಗಳು, ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.ಭಾರತ – ಫಿನ್ ಲೆಂಡ್ ವರ್ಚುವಲ್ ಶೃಂಗ ಸಭೆ
March 16th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್ ಲೆಂಡ್ ಗಣರಾಜ್ಯದ ಘನತೆವೆತ್ತ ಪ್ರಧಾನಿ ಸನ್ನಾ ಮರೀನ್ ವರ್ಚುವಲ್ ಶೃಂಗ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಮಗ್ರ ದ್ವಿಪಕ್ಷೀಯ ವಿಷಯಗಳು, ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.