ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.