Today, the world does not suffer from a shortage of resources; it suffers from a shortage of trust: PM Modi at G7 Summit in Evian, France

June 16th, 10:12 pm

Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ

June 16th, 10:07 pm

ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.

ರೈತರ ಕಲ್ಯಾಣ, ಆಧುನಿಕ ಕೃಷಿ ಸೌಲಭ್ಯಗಳು ಮತ್ತು ಕೃಷಿ ವಲಯದ ಸಬಲೀಕರಣಕ್ಕೆ ಸರ್ಕಾರದ ಬದ್ಧತೆ ವಿವರಿಸಿರುವ ಪ್ರಧಾನಮಂತ್ರಿ

June 11th, 04:19 pm

ದೇಶದ ಆಹಾರ ಭದ್ರತೆ, ಪೋಷಣೆ ಮತ್ತು ಸಮೃದ್ಧಿಗೆ ನಮ್ಮ ರೈತ ಸಹೋದರ ಸಹೋದರಿಯರೇ ಆಧಾರಸ್ತಂಭಗಳಾಗಿದ್ದು ಅವರ ಜೀವನವನ್ನು ಸುಲಲಿತಗೊಳಿಸಲು ಸರ್ಕಾರವು ಯಾವ ಅವಕಾಶವನ್ನೂ ಕೈಚೆಲ್ಲುವುದಿಲ್ಲ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒತ್ತಿ ಹೇಳಿದ್ದಾರೆ. ಪಿಎಂ-ಕಿಸಾನ್ ಸಮ್ಮಾನ್ ನಿಧಿ ಮತ್ತು ಫಸಲ್ ಬಿಮಾ ಯೋಜನೆಯಂತಹ ಉಪಕ್ರಮಗಳು ಕೃಷಿಕರ ಆದಾಯವನ್ನು ಭದ್ರಪಡಿಸುತ್ತಾ ಕೃಷಿಯನ್ನು ಸಬಲೀಕರಣಗೊಳಿಸುತ್ತಿವೆ ಎಂದು ಹೇಳಿರುವ ಅವರು, ಪಿಎಂ-ಕುಸುಮ್ ಯೋಜನೆಯು ಸೌರಶಕ್ತಿಯು ಸುಲಭವಾಗಿ ದೊರೆಯುವಂತೆ ಮಾಡುತ್ತಾ, ಕೃಷಿ ವೆಚ್ಚವನ್ನು ತಗ್ಗಿಸಿದೆ ಎಂದು ತಿಳಿಸಿದ್ದಾರೆ.

ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 20th, 11:00 pm

ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.

ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ

May 20th, 10:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಪ್ರಧಾನಿ ಮೋದಿ ಪ್ರಮುಖ ಕಾರ್ಯಕ್ರಮಗಳಿಗಾಗಿ ಇಟಲಿಗೆ ಆಗಮಿಸಿದ್ದಾರೆ

May 20th, 12:30 am

ಪ್ರಧಾನಿಯವರು ಸ್ವಲ್ಪ ಸಮಯದ ಹಿಂದೆ ಇಟಲಿಯ ರೋಮ್‌ಗೆ ಆಗಮಿಸಿದರು. ಅವರು ಇಟಾಲಿಯನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸೆರ್ಗಿಯೊ ಮ್ಯಾಟರೆಲ್ಲಾ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತು ಚರ್ಚೆಗಳೊಂದಿಗೆ ಪ್ರಧಾನಿ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 18th, 11:49 pm

ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.

ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

May 18th, 08:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)

May 17th, 03:15 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

May 17th, 02:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.

ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ

May 15th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.

ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ

April 20th, 10:55 pm

ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.

ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಡಾ. ಕ್ರಿಶ್ಚಿಯನ್ ಸ್ಟಾಕರ್ ಅವರ ಭಾರತ ಭೇಟಿಯ ಫಲಶೃತಿ

April 16th, 03:01 pm

ಭಾರತ ಮತ್ತು ಆಸ್ಟ್ರಿಯಾ ನಡುವೆ ಆಡಿಯೋವಿಶುವಲ್ ಸಹ ನಿರ್ಮಾಣಕ್ಕೆ ಒಪ್ಪಂದ

ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು

March 22nd, 09:06 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

March 02nd, 05:04 pm

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ

February 26th, 07:41 pm

ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ಸೇವಾ ಸಂಕಲ್ಪದ ನಿರ್ಣಯ

February 24th, 04:53 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ನೂತನ ಪ್ರಧಾನಮಂತ್ರಿ ಕಾರ್ಯಾಲಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಪ್ರಥಮ ಸಭೆಯು ನಡೆಯುತ್ತಿದೆ.

ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ

February 08th, 11:05 am

ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದ