India and Indonesia are connected not only by our history but also by a shared future: PM Modi at community programme in Jakarta
July 07th, 11:47 pm
Addressing the Indian community in Jakarta, PM Modi thanked the diaspora for their warm welcome and praised their contribution to Indonesia's progress and their role as a living bridge between the two nations. He spoke about India's rapid transformation and called upon the community to contribute towards the shared aspirations of Viksit Bharat 2047 and Indonesia Emas 2045.Prime Minister addresses the Indian diaspora in Jakarta
July 07th, 05:30 pm
Addressing the Indian community in Jakarta, PM Modi thanked the diaspora for their warm welcome and praised their contribution to Indonesia's progress and their role as a living bridge between the two nations. He spoke about India's rapid transformation and called upon the community to contribute towards the shared aspirations of Viksit Bharat 2047 and Indonesia Emas 2045.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ
June 28th, 11:30 am
‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
June 07th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಫುಟ್ಬಾಲ್ ಒಕ್ಕೂಟ (ಸ್ಯಾಫ್ - ಎಸ್ ಎ ಎಫ್ ಎಫ್) ಮಹಿಳಾ ಫುಟ್ಬಾಲ್ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡವನ್ನು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ವನಿತೆಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಯುವಕರೊಂದಿಗೆ ಉತ್ಸಾಹಭರಿತ ಫುಟ್ ಬಾಲ್ ಅಧಿವೇಶನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
April 28th, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಆಹ್ಲಾದಕರ ವಾತಾವರಣದಲ್ಲಿ ಬೆಳಗ್ಗೆ ಯುವಕರೊಂದಿಗೆ ರೋಮಾಂಚಕ ಫುಟ್ ಬಾಲ್ ಅಧಿವೇಶನದಲ್ಲಿ ಭಾಗವಹಿಸಿದರು.TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 08th, 08:30 pm
ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಕುವೈತ್ ನ ಅಮೀರ್ ಅವರ ಗೌರವಾನ್ವಿತ ಅತಿಥಿಯಾಗಿ ಅರೇಬಿಯನ್ ಗಲ್ಫ್ ಕಪ್ ನಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
December 21st, 10:24 pm
ಕುವೈತ್ ನ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದಲ್ಲಿ ‘ಗೌರವ ಅತಿಥಿ’ಯಾಗಿ ಭಾಗವಹಿಸಿದರು. ಘನತೆವೆತ್ತ ಕುವೈತ್ ದೊರೆ (ಅಮೀರ್), ಘನತೆವೆತ್ತ ಕುವೈತ್ ಯುವರಾಜ, ಮತ್ತು ಘನತೆವೆತ್ತ ಕುವೈತ್ ಪ್ರಧಾನಮಂತ್ರಿಯವರೊಂದಿಗೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಕುವೈತ್ ನ ಉನ್ನತ ನಾಯಕತ್ವದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅನೌಪಚಾರಿಕ ಸಂವಾದಕ್ಕೆ ಕೂಡಾ ಈ ಕಾರ್ಯಕ್ರಮವು ಅವಕಾಶವನ್ನು ಒದಗಿಸಿಕೊಟ್ಟಿತು.The entire North East is the Ashtalakshmi of India: PM at Bodoland Mohotsov
November 15th, 06:32 pm
Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.