ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

June 09th, 01:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆಗಾಗಿ ವಿದೇಶಿ ಆಡಳಿತದ ವಿರುದ್ಧ ಅವರು ಅದಮ್ಯ ಧೈರ್ಯದಿಂದ ಹೋರಾಡಿದ ಬಗ್ಗೆ ಪ್ರಧಾನಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

April 15th, 11:10 am

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

April 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.

ವಿಶ್ವ ವನ್ಯಜೀವಿ ದಿನದಂದು ವನ್ಯಜೀವಿ ಸಂರಕ್ಷಣೆಗೆ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ; ಸಂಸ್ಕೃತ ಸುಭಾಷಿತ ಹಂಚಿಕೊಂಡರು

March 03rd, 08:56 am

ವಿಶ್ವ ವನ್ಯಜೀವಿ ದಿನವು ನಮ್ಮ ಭೂಮಿಯನ್ನು ಸಮೃದ್ಧಗೊಳಿಸುವ ಮತ್ತು ನಮ್ಮ ಪರಿಸರ ವ್ಯವಸ್ಥೆಗಳನ್ನು ಉಳಿಸುವ ಅದ್ಭುತ ಪ್ರಾಣಿ ವೈವಿಧ್ಯತೆಯನ್ನು ಆಚರಿಸುವ ದಿನವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ವನ್ಯಜೀವಿ ರಕ್ಷಣೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬರನ್ನು ಅಭಿನಂದಿಸಲು ಮತ್ತು ವನ್ಯಜೀವಿಗಳು ನಿರಂತರವಾಗಿ ವೃದ್ಧಿಯಾಗಲು ಪೂರಕವಾದ ಸಂರಕ್ಷಣೆ, ಸುಸ್ಥಿರ ಪದ್ಧತಿಗಳು ಹಾಗೂ ವಾಸಸ್ಥಾನಗಳ ರಕ್ಷಣೆಯ ಬಗ್ಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಇದು ಸುಸಮಯವಾಗಿದೆ ಎಂದು ಅವರು ತಿಳಿಸಿದರು.

ಮಾರ್ಚ್ 3 ರಂದು ಗಿರ್ ನಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

March 03rd, 04:48 pm

ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದು, ಅಲ್ಲಿ ಅವರು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನಮಂತ್ರಿಯವರು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, ತಮ್ಮ ತಾಯಿಯ ಗೌರವಾರ್ಥವಾಗಿ ಒಂದು ಮರವನ್ನು ನೆಟ್ಟು ಸುಸ್ಥಿರ ಪ್ರಪಂಚಕ್ಕೆ ಕೊಡುಗೆ ನೀಡುವಂತೆ ಜನರನ್ನು ಮನವಿ ಮಾಡಿದ್ದಾರೆ

November 16th, 09:56 pm

ಹೆಚ್ಚಿನ ಜನರು ಇಂದು ತಮ್ಮ ತಾಯಿಯ ಗೌರವಾರ್ಥವಾಗಿ ಒಂದು ಮರವನ್ನು ನೆಟ್ಟು ಸುಸ್ಥಿರ ಪ್ರಪಂಚಕ್ಕೆ ಕೊಡುಗೆ ನೀಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಮನವಿ ಮಾಡಿದ್ದಾರೆ. ಏಕ್ ಪೆಡ್ ಮಾ ಕಾ ನಾಮ್ ಅಭಿಯಾನಕ್ಕೆ ಸಹಕಾರ ನೀಡಿದ ಎಲ್ಲರಿಗೂ ಶ್ರೀ ಮೋದಿಯವರು ಕೃತಜ್ಞತೆ ಅರ್ಪಿಸಿದ್ದಾರೆ.

ಫಲಿತಾಂಶಗಳ ಪಟ್ಟಿ: ರಷ್ಯಾಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ

July 09th, 09:59 pm

2024 ರಿಂದ 2029 ರವರೆಗಿನ ರಷ್ಯಾದ ದೂರಪ್ರಾಚ್ಯದಲ್ಲಿ ವ್ಯಾಪಾರ, ಆರ್ಥಿಕ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರದ ಕಾರ್ಯಕ್ರಮ ಮತ್ತು ರಷ್ಯಾದ ಒಕ್ಕೂಟದ ಆರ್ಕ್ಟಿಕ್ ವಲಯದಲ್ಲಿ ಸಹಕಾರ ತತ್ವಗಳು

ಉಷ್ಣ ತರಂಗ ಸಂಬಂಧಿತ ಪರಿಸ್ಥಿತಿಗೆ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು

April 11th, 09:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಂತರದ ಬಿಸಿಗಾಳಿ ಋತುವಿನ ಸಿದ್ಧತೆಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 29th, 09:35 pm

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ʻಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 04th, 11:00 am

ಪುಟ್ಟಪರ್ತಿಗೆ ಹಲವು ಬಾರಿ ಭೇಟಿ ನೀಡುವ ಸೌಭಾಗ್ಯ ನನಗೆ ದೊರೆತಿದೆ. ನಾನು ಮತ್ತೊಮ್ಮೆ ನಿಮ್ಮೆಲ್ಲರ ನಡುವೆ ಇರಲು ಬಯಸಿದ್ದೆ, ನಿಮ್ಮನ್ನು ಭೇಟಿಯಾಗಲು ಮತ್ತು ಇಂದು ಅಲ್ಲಿ ಉಪಸ್ಥಿತರಿರುವ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆ. ಆದರೆ, ನನ್ನ ಬಿಡುವುರಹಿತ ವೇಳಾಪಟ್ಟಿಯಿಂದಾಗಿ, ನನಗೆ ಇದು ಸಾಧ್ಯವಾಗಲಿಲ್ಲ. ನನ್ನನ್ನು ಆಹ್ವಾನಿಸುವಾಗ, ಭಾಯಿ ರತ್ನಾಕರ್ ಅವರು 'ನೀವು ಒಮ್ಮೆ ಬಂದು ಆಶೀರ್ವಾದ ನೀಡಬೇಕು' ಎಂದು ಹೇಳಿದರು. ರತ್ನಾಕರ್ ಅವರ ಹೇಳಿಕೆಯನ್ನು ಸರಿಪಡಿಸುವ ಅಗತ್ಯವಿದೆ ನಾನು ಭಾವಿಸುತ್ತೇನೆ. ನಾನು ಖಂಡಿತವಾಗಿಯೂ ಅಲ್ಲಿಗೆ ಬರುತ್ತೇನೆ, ಆದರೆ ಆಶೀರ್ವಾದ ನೀಡಲು ಅಲ್ಲ, ಬದಲಾಗಿ ಆಶೀರ್ವಾದ ಪಡೆಯಲು. ತಂತ್ರಜ್ಞಾನದ ಸಹಾಯದಿಂದ ನಾನು ಇಂದು ನಿಮ್ಮೆಲ್ಲರ ನಡುವೆ ಇದ್ದೇನೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಜೊತೆ ಸಂಬಂಧ ಹೊಂದಿರುವ ಎಲ್ಲಾ ಸದಸ್ಯರು ಮತ್ತು ಸತ್ಯ ಸಾಯಿ ಬಾಬಾ ಅವರ ಎಲ್ಲಾ ಭಕ್ತರನ್ನು ಇಂದು ಈ ಕಾರ್ಯಕ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ಇಡೀ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಅವರ ಸ್ಫೂರ್ತಿ ಮತ್ತು ಆಶೀರ್ವಾದ ನಮ್ಮೊಂದಿಗಿದೆ. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಧ್ಯೇಯದ ವಿಸ್ತರಣೆಯನ್ನು ನೋಡಿ ನನಗೆ ಸಂತಸವಾಗಿದೆ. ದೇಶವು ʻಶ್ರೀ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ರೂಪದಲ್ಲಿ ಪ್ರಮುಖ ಚಿಂತಕರ ಚಾವಡಿಯನ್ನು ಪಡೆಯುತ್ತಿದೆ. ನಾನು ಈ ಸಮಾವೇಶ ಕೇಂದ್ರದ ಚಿತ್ರಗಳನ್ನು ಮತ್ತು ಅದರ ಇಣುಕುನೋಟಗಳನ್ನು ಈಗ ಪ್ರದರ್ಶಿಸಲಾದ ಕಿರುಚಿತ್ರದಲ್ಲಿ ನೋಡಿದ್ದೇನೆ. ಇದು ಆಧುನಿಕತೆಯ ಸ್ಪರ್ಶದೊಂದಿಗೆ ಆಧ್ಯಾತ್ಮಿಕ ಅನುಭವವನ್ನು ಒದಗಿಸುತ್ತದೆ. ಇದು ಸಾಂಸ್ಕೃತಿಕ ದೈವತ್ವದ ಜೊತೆಗೆ, ಬೌದ್ಧಿಕ ಭವ್ಯತೆಯನ್ನು ಒಳಗೊಂಡಿದೆ. ಈ ಕೇಂದ್ರವು ಆಧ್ಯಾತ್ಮಿಕ ಸಮ್ಮೇಳನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಪ್ರಪಂಚದಾದ್ಯಂತದ ವಿವಿಧ ಕ್ಷೇತ್ರಗಳ ವಿದ್ವಾಂಸರು ಮತ್ತು ತಜ್ಞರು ಇಲ್ಲಿ ಒಟ್ಟುಗೂಡುತ್ತಾರೆ. ಈ ಕೇಂದ್ರವು ಯುವಕರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ.

ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ

July 04th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಶ್ರೀ ಸಾಯಿ ಹಿರಾ ಜಾಗತಿಕ ಸಮ್ಮೇಳನ ಸಭಾಂಗಣ (ಗ್ಲೋಬಲ್ ಕನ್ವೆನ್ಷನ್ ಸೆಂಟರ್) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತದಿಂದ ಆಗಮಿಸಿರುವ ಪ್ರಮುಖ ಗಣ್ಯರು ಮತ್ತು ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.

PM visits Bandipur and Mudumalai Tiger Reserves

April 09th, 02:48 pm

PM Modi visited the Bandipur and Mudumalai Tiger Reserves in Karnataka and Tamil Nadu. He also visited the Theppakadu Elephant camp in Mudumalai Tiger Reserve where he interacted with mahouts and kavadis and also fed the elephants. The PM also interacted with elephant keepers featured in the Oscar-winning documentary, The Elephant Whisperers.

​​​​​​​ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

April 09th, 01:00 pm

ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!

ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ

April 09th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.

ಸ್ಥಳಾಂತರಗೊಂಡ ಚಿರತೆಗಳ ಪೈಕಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು

March 29th, 04:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 10th, 09:43 pm

ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.

ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ

March 10th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .

India is a rapidly developing economy and continuously strengthening its ecology: PM Modi

September 23rd, 04:26 pm

PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.

PM inaugurates the National Conference of Environment Ministers of all States in Ekta Nagar, Gujarat

September 23rd, 09:59 am

PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚೀತಾ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ

September 17th, 11:51 am

ಕಾಲ ಚಕ್ರವು ನಮಗೆ ಗತಕಾಲದ ತಪ್ಪುಗಳನ್ನು ಸರಿಪಡಿಸಲು ಮತ್ತು ಹೊಸ ಭವಿಷ್ಯವನ್ನು ರೂಪಿಸಲು ಮಾನವತೆಯ ಮುಂದೆ ಇಂತಹ ಕೆಲವೇ ಅವಕಾಶಗಳನ್ನು ನೀಡುತ್ತದೆ. ಇಂದು ಅದೃಷ್ಟವಶಾತ್ ಅಂತಹ ಒಂದು ಕ್ಷಣವು ನಮ್ಮ ಮುಂದಿದೆ. ದಶಕಗಳ ಹಿಂದೆ, ಜೀವವೈವಿಧ್ಯತೆಯ ಹಳೆಯ ಕೊಂಡಿಯು ಕಡಿದುಹೋಗಿತ್ತು, ಅಳಿದುಹೋಗಿತ್ತು, ಇಂದು ನಾವು ಅದನ್ನು ಮರುಸಂಪರ್ಕಿಸುವ ಅವಕಾಶವನ್ನು ಪಡೆದಿದ್ದೇವೆ. ಇಂದು, ಚೀತಾಗಳು ಭಾರತೀಯ ಮಣ್ಣಿಗೆ ಮರಳಿವೆ. ಮತ್ತು ಈ ಚೀತಾಗಳ ಜೊತೆಗೆ, ಭಾರತದ ಪ್ರಕೃತಿ-ಪ್ರೀತಿಯ ಪ್ರಜ್ಞೆಯೂ ಸಹ ಪೂರ್ಣ ಬಲದಿಂದ ಜಾಗೃತವಾಗಿದೆ ಎಂದು ನಾನು ಹೇಳುತ್ತೇನೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.