Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21st, 04:25 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam
December 21st, 12:00 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025ರಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಸಂವಾದ
November 20th, 12:30 pm
ಇವೆಲ್ಲವೂ ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು, ಇದು ತ್ಯಾಜ್ಯ... ಸರ್, ಇದು ಬಾಳೆಹಣ್ಣಿನ ತ್ಯಾಜ್ಯದಿಂದ ಬಂದಿದೆ; ಇದು ಬಾಳೆಹಣ್ಣಿನ ಮೌಲ್ಯವರ್ಧನೆಯಿಂದ ಬಂದಿದೆ, ಸರ್ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 20th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ ಉತ್ಪನ್ನಗಳು ಭಾರತದಾದ್ಯಂತ ಆನ್ ಲೈನ್ ನಲ್ಲಿ ಮಾರಾಟವಾಗುತ್ತವೆಯೇ ಎಂದು ಪ್ರಧಾನಮಂತ್ರಿಯವರು ಕೇಳಿದರು, ಅದಕ್ಕೆ ರೈತರು ಹೌದು ಎಂದು ಉತ್ತರಿಸಿದರು. ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ವೈಯಕ್ತಿಕ ಕೊಡುಗೆದಾರರ ಮೂಲಕ ತಾವು ಇಡೀ ತಮಿಳುನಾಡನ್ನು ಪ್ರತಿನಿಧಿಸುತ್ತಿರುವುದಾಗಿ ರೈತರು ತಿಳಿಸಿದರು. ತಮ್ಮ ಉತ್ಪನ್ನಗಳು ಆನ್ ಲೈನ್ನಲ್ಲಿ ಮಾರಾಟವಾಗುವುದರ ಜೊತೆಗೆ ರಫ್ತು ಕೂಡ ಆಗುತ್ತವೆ ಮತ್ತು ಭಾರತದಾದ್ಯಂತ ಸ್ಥಳೀಯ ಮಾರುಕಟ್ಟೆಗಳು ಹಾಗೂ ಸೂಪರ್ಮಾರ್ಕೆಟ್ ಗಳಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ FPO ನಲ್ಲಿ ಎಷ್ಟು ಜನರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದು ಶ್ರೀ ಮೋದಿ ಕೇಳಿದರು, ಇದಕ್ಕೆ ಉತ್ತರಿಸಿದ ರೈತರು, ಸುಮಾರು ಒಂದು ಸಾವಿರ ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಇದನ್ನು ಆಲಿಸಿದ ಪ್ರಧಾನಮಂತ್ರಿಯವರು, ಬಾಳೆ ಕೃಷಿಯನ್ನು ಒಂದೇ ಪ್ರದೇಶದಲ್ಲಿ ಪ್ರತ್ಯೇಕವಾಗಿ ಮಾಡಲಾಗುತ್ತಿದೆಯೇ ಅಥವಾ ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ರೈತರು, ವಿವಿಧ ಪ್ರದೇಶಗಳು ವಿಭಿನ್ನ ಮತ್ತು ವಿಶೇಷ ಉತ್ಪನ್ನಗಳಲ್ಲಿ ಪರಿಣತಿ ಹೊಂದಿವೆ ಎಂದು ತಿಳಿಸಿದರು ಮತ್ತು ತಮ್ಮಲ್ಲಿ ಜಿಐ (GI - ಭೌಗೋಳಿಕ ಸೂಚಕ) ಟ್ಯಾಗ್ ಹೊಂದಿರುವ ಉತ್ಪನ್ನಗಳು ಸಹ ಇವೆ ಎಂದು ಹೇಳಿದರು.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ನವದೆಹಲಿಯಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಅವರು ನಡೆಸಿದ ಸಂವಾದದ ಕನ್ನಡ ಅವತರಣಿಕೆ
October 12th, 06:45 pm
ರಾಮ್-ರಾಮ್! ನಾನು ಹರಿಯಾಣದ ಹಿಸಾರ್ ಜಿಲ್ಲೆಯವನು. ನಾನು ಕಾಬೂಲಿ ಚನಾ (ಕಡಲೆ) ಕೃಷಿಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಸ್ವಲ್ಪ ಮಾತ್ರ ಇತ್ತು..ಕೃಷಿ ಕ್ಷೇತ್ರದಲ್ಲಿ ₹35,440 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು
October 12th, 06:25 pm
ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವು ರೈತರ ಕಲ್ಯಾಣ, ಕೃಷಿಯಲ್ಲಿ ಸ್ವಾವಲಂಬನೆ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರಿಗಿರುವ ನಿರಂತರ ಬದ್ಧತೆಯನ್ನು ಸಾರುತ್ತದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ನಂತರ ಕೃಷಿ ವಲಯಕ್ಕಾಗಿ ₹35,440 ಕೋಟಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. ಅವರು ₹24,000 ಕೋಟಿ ವೆಚ್ಚದ 'ಪಿ.ಎಂ. ಧನ ಧಾನ್ಯ ಕೃಷಿ ಯೋಜನೆ' ಹಾಗೂ ₹11,440 ಕೋಟಿ ವೆಚ್ಚದ 'ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್' ಅನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ವಲಯಗಳಿಗೆ ಸಂಬಂಧಿಸಿದ ₹5,450 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ, ಸುಮಾರು ₹815 ಕೋಟಿ ಮೌಲ್ಯದ ಹೆಚ್ಚುವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಉದ್ಘಾಟನೆ ಮತ್ತು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
October 11th, 12:30 pm
ಇಂದು, ಅಕ್ಟೋಬರ್ 11, ಒಂದು ಐತಿಹಾಸಿಕ ದಿನ. ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ ಭಾರತ ಮಾತೆಯ ಇಬ್ಬರು ಮಹಾನ್ ರತ್ನಗಳಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜೀ ಮತ್ತು ಭಾರತ ರತ್ನ ಶ್ರೀ ನಾನಾ ಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರೂ ಮಹಾನ್ ಪುತ್ರರು ಗ್ರಾಮೀಣ ಭಾರತದ ಧ್ವನಿಯಾಗಿದ್ದರು, ಪ್ರಜಾಪ್ರಭುತ್ವ ಕ್ರಾಂತಿಯ ನಾಯಕರಾಗಿದ್ದರು ಮತ್ತು ರೈತರು ಹಾಗು ಬಡವರ ಕಲ್ಯಾಣಕ್ಕೆ ಸಮರ್ಪಿಸಿಕೊಂಡಿದ್ದರು. ಇಂದು, ಈ ಐತಿಹಾಸಿಕ ದಿನದಂದು, ದೇಶದ ಸ್ವಾವಲಂಬನೆಗಾಗಿ ಮತ್ತು ರೈತರ ಕಲ್ಯಾಣಕ್ಕಾಗಿ ಎರಡು ಪ್ರಮುಖ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೆಯದು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಎರಡನೆಯದು ಪಲ್ಸ್ ಸ್ವಾವಲಂಬನೆ ಮಿಷನ್ (ದಲ್ಹನ್ ಆತ್ಮ ನಿರ್ಭರತಾ ಮಿಷನ್). ಈ ಎರಡು ಯೋಜನೆಗಳು ಭಾರತದ ಲಕ್ಷಾಂತರ ರೈತರ ಭವಿಷ್ಯವನ್ನು ಪರಿವರ್ತಿಸುತ್ತವೆ. ಈ ಯೋಜನೆಗಳಿಗೆ ಭಾರತ ಸರ್ಕಾರ 35,000 ಕೋಟಿ ರೂಪಾಯಿಗಳಿಗೂ ಹೆಚ್ಚು ಖರ್ಚು ಮಾಡಲಿದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಪಲ್ಸ್ ಸ್ವಾವಲಂಬನೆ ಮಿಷನ್‌ಗಾಗಿ ನನ್ನ ಎಲ್ಲಾ ರೈತ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.PM Modi launches two major schemes in the agriculture sector with an outlay of Rs 35,440 crore
October 11th, 12:00 pm
At a programme in Delhi, PM Modi launched projects and schemes worth over Rs 35,400 crore in the Agriculture and Allied Sectors. The PM Dhan Dhaanya Krishi Yojana aims to enhance agricultural productivity, promote crop persification and sustainable practices in selected districts. He also launched the Dalhan Aatmanirbharta Mission, focused on boosting productivity and expanding the cultivation of pulses. PM Modi emphasised, “On one hand, we must be self-reliant; on the other, we must produce for the global market as well.”ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 07th, 09:20 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 07th, 09:00 am
ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 22nd, 02:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, ಪ್ರಧಾನಮಂತ್ರಿಯವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹಾಗೂ ಆನಂತರ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 6 ಗಂಟೆಗೆ ಅವರು ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 25 ರಂದು, ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,