ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ
February 09th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 09th, 01:00 pm
ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.ಡಾ. ಆಂಡ್ರ್ಯೂ ಹೋಲ್ನೆಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 05th, 10:52 pm
ಜಮೈಕಾ ಪಕ್ಷವನ್ನು ಸತತ ಮೂರನೇ ಬಾರಿಗೆ ಗೆಲುವಿನತ್ತ ಮುನ್ನಡೆಸಿದ ಡಾ. ಆಂಡ್ರ್ಯೂ ಹೋಲ್ನೆಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಜಮೈಕಾ ಸ್ನೇಹ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಿ ನಮ್ಮ ಎರಡೂ ದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಸದಾ ಸಿದ್ದರಾಗಿದ್ದೇವೆ ಎಂದು ಶ್ರೀ ಮೋದಿ ಅವರು ಹೇಳಿದರು.ಕ್ಯಾಪ್ಟನ್ ವಿಜಯಕಾಂತ್ ಅವರು ಸಮಾಜಕ್ಕೆ ಮಾಡಿದ ಸೇವೆಯ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪ
April 14th, 11:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕ್ಯಾಪ್ಟನ್ ವಿಜಯಕಾಂತ್ ಅವರೊಂದಿಗಿನ ಒಡನಾಟವನ್ನು ಮತ್ತು ಸಮಾಜಕ್ಕೆ ವಿಜಯಕಾಂತ್ ಅವರ ಸೇವೆಯನ್ನು ಸ್ಮರಿಸಿದ್ದಾರೆ.ಪ್ರಧಾನಮಂತ್ರಿ ಅವರಿಗೆ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪ್ರದಾನ
April 05th, 02:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಅಧ್ಯಕ್ಷ ದಿಸ್ಸನಾಯಕೆ ಅವರು 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪ್ರದಾನ ಮಾಡಿದರು. ಕೃತಜ್ಞತೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ, ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಐತಿಹಾಸಿಕ ಬಾಂಧವ್ಯದ ಸಂಕೇತವಾಗಿದೆ ಎಂದರು.ನೇಪಾಳದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮಾ ಓಲಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ
July 15th, 11:39 am
ನೇಪಾಳದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ.ಕೆ.ಪಿ.ಶರ್ಮಾ ಓಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತ ಮತ್ತು ನೇಪಾಳ ನಡುವಿನ ಸ್ನೇಹದ ಆಳ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಮತ್ತು ಪರಸ್ಪರ ಸಹಕಾರ ವಿಸ್ತರಿಸಲು ನಿಕಟವಾಗಿ ಕಾರ್ಯನಿರ್ವಹಿಸುವ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ
July 10th, 02:45 pm
ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
February 13th, 11:19 pm
ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ
February 13th, 08:30 pm
ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.