ಸಂಸತ್ತಿನ 2026ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 20th, 10:30 am
ಮುಂಗಾರಿನ ಪ್ರಯೋಜನಗಳು ಗೋಚರಿಸುತ್ತಿವೆ ಮತ್ತು ಮಳೆಗಾಲದ ಅಧಿವೇಶನವೂ ಪ್ರಾರಂಭವಾಗುತ್ತಿದೆ. ಅದು ಮುಂಗಾರು ಮಳೆಯಾಗಿರಲಿ ಅಥವಾ ಮುಂಗಾರು ಅಧಿವೇಶನವಾಗಲಿ - ಎರಡೂ ಸಕ್ರಿಯವಾಗಿದ್ದಾಗ, ಅವು ಹೆಚ್ಚು ಉತ್ಪಾದಕವಾಗುತ್ತವೆ; ಮತ್ತು ಎರಡೂ ಉತ್ಪಾದಕವಾಗಿದ್ದರೆ, ಅದು ರಾಷ್ಟ್ರದ ಕಲ್ಯಾಣ ಮತ್ತು ಎಲ್ಲಾ ಜೀವಿಗಳ ಯೋಗಕ್ಷೇಮಕ್ಕೆ ಕಾರಣವಾಗುತ್ತದೆ. ಆದ್ದರಿಂದ, ಮುಂಗಾರು ಸಕ್ರಿಯವಾಗಿ ಇರಲಿ ಮತ್ತು ಮುಂಗಾರಿನ ಅಧಿವೇಶನವು ಉತ್ಪಾದಕವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ.2026ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
July 20th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2026ರ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಹೊಸ ಸಂಸತ್ತಿನ ಅಧಿವೇಶನದ ಆರಂಭಕ್ಕೆ ಆಗಮಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ನೈಸರ್ಗಿಕ ಹವಾಮಾನ ಮಾದರಿಗಳು ಮತ್ತು ಶಾಸಕಾಂಗ ಉತ್ಪಾದಕತೆಯ ನಡುವೆ ಸಮಾನಾಂತರವಾದ ಹೋಲಿಕೆಯನ್ನು ಮಾಡಿದರು. ರಾಷ್ಟ್ರದ ಸರ್ವತೋಮುಖ ಯೋಗಕ್ಷೇಮದ ಮೇಲೆ ಸಕ್ರಿಯ ಮತ್ತು ದೂರದೃಷ್ಟಿಯ ಕ್ರಮಗಳ ಆಳವಾದ ಪ್ರಭಾವವನ್ನು ಎತ್ತಿಹಿಡಿದ ಪ್ರಧಾನಮಂತ್ರಿಯವರು, ಅಂತಿಮವಾಗಿ ಪ್ರತಿಯೊಂದು ಜೀವಿಗೂ ಪ್ರಯೋಜನವನ್ನು ನೀಡುವ ಅತ್ಯಂತ ರಚನಾತ್ಮಕ ಫಲಿತಾಂಶಗಳ ನಿರೀಕ್ಷೆಯನ್ನು ವ್ಯಕ್ತಪಡಿಸಿದರು. ಮುಂಗಾರು ಸಕ್ರಿಯವಾಗಿರಲಿ ಮತ್ತು ಮುಂಗಾರು ಅಧಿವೇಶನವೂ ಉತ್ಪಾದಕವಾಗಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ, ಎಂದು ಶ್ರೀ ಮೋದಿ ಹೇಳಿದರು.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಒಎಸ್‌ಎಟಿ ಸೌಲಭ್ಯ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 05:15 pm
2024ರಲ್ಲಿ ಈ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ನನಗೆ ಸಿಕ್ಕಿತ್ತು. 2025 ಆಗಸ್ಟ್ ಹೊತ್ತಿಗೆ ಚಿಪ್ ಪರೀಕ್ಷಾ ಕಾರ್ಯ ಇಲ್ಲಿ ಪ್ರಾರಂಭವಾಯಿತು, ಇಂದು ಈ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಶಂಕುಸ್ಥಾಪನೆಯಿಂದ ಹಿಡಿದು ಉತ್ಪಾದನೆಯ ತನಕದ ಪ್ರಯಾಣವು ನಿಸ್ಸಂದೇಹವಾಗಿ ಅನೇಕ ಸಹೋದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಸುಬ್ಬಯ್ಯ ಜಿ ಅವರಂತಹ ನಾಯಕರ ಫಲವಾಗಿದೆ. ವೇದಿಕೆಗೆ ಬರುವ ಮೊದಲು, ಈ ಯೋಜನೆಗೆ ಸಂಬಂಧಿಸಿದ ಅನೇಕರೊಂದಿಗೆ ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿತು. ಈ ಕ್ಯಾಂಪಸ್‌ನಲ್ಲಿ ಒಂದು ಮಿನಿ ಭಾರತ ವಾಸಿಸುತ್ತಿದೆ ಎಂದು ಭಾಸವಾಯಿತು - ಎಲ್ಲಾ ಭಾಷೆ, ಉಡುಪು ಮತ್ತು ಪಾಕ ಪದ್ಧತಿಯ ಜನರು ಇಲ್ಲಿದ್ದಾರೆ. ನನ್ನ ಪ್ರದರ್ಶನ ಭೇಟಿಯ ಸಮಯದಲ್ಲಿ ನಾನು ಅನೇಕ ಯುವಕ-ಯುವತಿಯರೊಂದಿಗೆ ಮಾತನಾಡಿದೆ. ನಾನು ಹೆಮ್ಮೆಯಿಂದ ಉಲ್ಲೇಖಿಸಬೇಕಾದ ಒಂದು ವಿಷಯವೆಂದರೆ, ಅವರ ಆತ್ಮವಿಶ್ವಾಸದ ಮಟ್ಟ. ಅವರು ಮಾತನಾಡಿದ ದೃಢನಿಶ್ಚಯ, ತಂತ್ರಜ್ಞಾನದ ಮೇಲಿನ ಅವರ ನಂಬಿಕೆ – ಇದರಿಂದ ನಾನು ನಿಜವಾಗಿಯೂ ಪ್ರಭಾವಿತನಾದೆ.ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (ಒಎಸ್‌ಎಟಿ) ಸೌಲಭ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
July 04th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸನಂದ್‌ನಲ್ಲಿ CG ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯವನ್ನು ಉದ್ಘಾಟಿಸಿದರು. ಈ ಸಂದರ್ಭದ ಮಹತ್ವವನ್ನು ವಿವರಿಸಿದ, ಪ್ರಧಾನಮಂತ್ರಿಯವರು ಈ ಉಡಾವಣೆಯನ್ನು ರಾಷ್ಟ್ರವು ತನ್ನ ಗುರಿಗಳಿಗೆ ಹೊಂದಿರುವ ಅಚಲ ಬದ್ಧತೆಗೆ ಸಾಕ್ಷಿಯಾಗಿ ರೂಪಿಸಿದರು. ದೇಶವು ತನ್ನ ಬಲವಾದ ನಿರ್ಣಯಗಳನ್ನು ಹಿಂಜರಿಕೆಯಿಲ್ಲದೆ ನಿರಂತರವಾಗಿ ಸ್ಪಷ್ಟ ವಾಸ್ತವಗಳಾಗಿ ಪರಿವರ್ತಿಸುತ್ತದೆ ಎಂದು ಅವರು ಹೇಳಿದರು. ಭಾರತವು ಏನು ಮಾಡಲು ನಿರ್ಧರಿಸಿದರೂ ಅದು ದೃಢವಾಗಿ ಸಾಧಿಸುತ್ತದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಪುರಾವೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
July 02nd, 03:35 pm
ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ" ಕುರಿತ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 05:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ವಿಷಯದ ಕುರಿತಾದ ಔಟ್ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಜಿ 7 ಶೃಂಗಸಭೆ-ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ: ಎ.ಐ.ಯ (ಕೃತಕ ಬುದ್ಧಿಮತ್ತೆಯ) ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವಿಕೆ
June 17th, 09:20 pm
ನಮ್ಮ ಚರ್ಚೆಗಳಲ್ಲಿ ಈ ಪ್ರಮುಖ ವಿಷಯವನ್ನು ಸೇರಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಕೃತಕ ಬುದ್ಧಿಮತ್ತೆಯು ಮಾನವಕುಲವು ಇದುವರೆಗೆ ಸೃಷ್ಟಿಸಿದ ಅತ್ಯಂತ ಪರಿವರ್ತಕ ತಂತ್ರಜ್ಞಾನಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ಅವಿರತ ಪ್ರಯತ್ನ ಮತ್ತು ದೃಢ ಸಂಕಲ್ಪದ ಶಕ್ತಿಯನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
May 27th, 08:36 am
ನಿರಂತರ ಪ್ರಯತ್ನ, ಸಹನೆ ಮತ್ತು ದೃಢ ಸಂಕಲ್ಪದ ಮೂಲಕ ಅತಿದೊಡ್ಡ ಗುರಿಗಳನ್ನೂ ನಾವು ಜೀವನದಲ್ಲಿ ಸಾಧಿಸಬಹುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವನ್ನು ಹೊಸ ಎತ್ತರದ ದಿಕ್ಕಿಗೆ ಕೊಂಡೊಯ್ಯುವಲ್ಲಿ ದೇಶದ ಜನರು ಇದೇ ಮನೋಭಾವದಿಂದ ಪ್ರೇರಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 20th, 05:00 pm
ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.