ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 28th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:46 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 23rd, 09:41 pm
ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದರು.ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
November 21st, 06:45 am
ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.