ಜಿ 7 ಶೃಂಗಸಭೆಯ ಜನಸಂಪರ್ಕ (ಔಟ್ ರೀಚ್) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ: ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ನಿರ್ಮಾಣ
June 16th, 10:12 pm
ಇಂದಿನ ಜಗತ್ತು ಹಿಂದೆಂದಿಗಿಂತಲೂ ಹೆಚ್ಚಿನ ಸಂಪರ್ಕ ಹೊಂದಿದೆ ಮತ್ತು ಪರಸ್ಪರ ಅವಲಂಬಿತವಾಗಿದೆ. ಒಂದು ದೇಶದ ಇಂಧನ ಭದ್ರತೆ, ಆಹಾರ ಭದ್ರತೆ, ಆರೋಗ್ಯ ಭದ್ರತೆ, ಸೈಬರ್ ಭದ್ರತೆ ಮತ್ತು ಆರ್ಥಿಕ ಭದ್ರತೆಯು ಇನ್ನು ಮುಂದೆ ಅದರ ಗಡಿಯೊಳಗೆ ಏನು ನಡೆಯುತ್ತದೆ ಎಂಬುದರ ಮೇಲೆ ಮಾತ್ರ ಅವಲಂಬಿತವಾಗಿಲ್ಲ. ಚಲನಶೀಲತೆ, ದತ್ತಾಂಶ, ಹಣ ಮತ್ತು ತಂತ್ರಜ್ಞಾನ ಎಲ್ಲವೂ ನಮ್ಮನ್ನು ಒಟ್ಟಿಗೆ ಸಂಪರ್ಕಿಸುತ್ತವೆ.ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ
June 16th, 10:07 pm
ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ
June 18th, 11:15 am
ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.