ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್ ಜಂಟಿ ಹೇಳಿಕೆ
March 05th, 08:03 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.ಮುಂಬೈಯ ವೇವ್ಸ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಇಂಗ್ಲೀಷ್ ಅವತರಣಿಕೆ
May 01st, 03:35 pm
ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇವ್ಸ್ 2025 ಅನ್ನು ಉದ್ಘಾಟಿಸಿದರು
May 01st, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ ಎಂದು ಅವರು ಹೇಳಿದರು, ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು ಸಂಪರ್ಕ ಸಾಧಿಸಲು ಮತ್ತು ಸಹಕರಿಸಲು ಜಾಗತಿಕ ವೇದಿಕೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲರನ್ನು ಪ್ರಧಾನಿ ಅಭಿನಂದಿಸಿದರು ಮತ್ತು ಭಾರತ ಮತ್ತು ವಿದೇಶಗಳಿಂದ ಬಂದ ಗಣ್ಯ ಅತಿಥಿಗಳಿಗೆ ಆತ್ಮೀಯ ಸ್ವಾಗತವನ್ನು ಕೋರಿದರು.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ
August 15th, 10:16 am
ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು
April 13th, 12:33 pm
ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.