ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 11th, 05:45 pm
ಈ ಅದ್ಭುತ ನಗರ ತಿರುಚಿಯಲ್ಲಿ ಇರುವುದು ನನಗೆ ತುಂಬಾ ಸಂತೋಷ ನೀಡುತ್ತಿದೆ. ಇಂದಿನ ಕಾರ್ಯಕ್ರಮವು ತಮಿಳುನಾಡಿನ ಭವಿಷ್ಯಕ್ಕೆ ಮಹತ್ವದ್ದಾಗಿದೆ. ಇದು 5 ಸಾವಿರದ 600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಂಬಂಧಿಸಿದೆ. ಈ ಯೋಜನೆಗಳು: ಸ್ವಚ್ಛ ಇಂಧನಕ್ಕಾಗಿ ಮೂಲಸೌಕರ್ಯ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ, ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆ ಯೋಜನೆಗಳಾಗಿವೆ. ಅವು ಇಂಧನ ಪ್ರವೇಶ, ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಕರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ಮಾಡಿ, ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 11th, 05:30 pm
ತಮಿಳುನಾಡಿನ ಮೂಲಸೌಕರ್ಯ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಅಭಿವೃದ್ಧಿ ಯೋಜನೆಗಳ ಸರಣಿಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಐತಿಹಾಸಿಕ ನಗರವಾದ ತಿರುಚ್ಚಿಗೆ ಭೇಟಿ ನೀಡಿದರು. ಒಟ್ಟು ಐದು ಸಾವಿರದ ಆರುನೂರು ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ, ಈ ಉಪಕ್ರಮಗಳು ಶುದ್ಧ ಇಂಧನ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ ಮತ್ತು ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆಗಳ ಮೂಲಕ ವರ್ಧಿತ ಬಹು-ಮಾದರಿ ಸಂಪರ್ಕ ವಿಸ್ತರಣೆಯ ಉದ್ದೇಶಗಳನ್ನು ಒಳಗೊಂಡಿವೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಈ ಯೋಜನೆಗಳು ಇಂಧನ ಲಭ್ಯತೆ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಜನರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು.ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 11:00 am
ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್‌ನ ಐ.ಎಫ್.ಎಸ್ ಅಧಿಕಾರಿ ತರಬೇತಿದಾರರು
August 19th, 08:34 pm
ಭಾರತೀಯ ವಿದೇಶಾಂಗ ಸೇವೆ (ಐ.ಎಫ್.ಎಸ್)ಯ 2024ರ ಬ್ಯಾಚ್ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್‌ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಜುಲೈ 26-27ರಂದು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 25th, 10:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 26ರಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಟ್ಯುಟಿಕೋರಿನ್ ನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ 4800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.