ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

September 04th, 05:35 pm

ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

September 04th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 23rd, 10:10 pm

ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.

ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 23rd, 05:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

June 28th, 08:24 pm

ಇಂದು ನೀವು ನಿಮ್ಮ ಮಾತೃಭೂಮಿ ಭಾರತದ ಭೂಮಿಯಿಂದ ದೂರದಲ್ಲಿದ್ದೀರಿ, ಆದರೆ ನೀವು ಭಾರತೀಯರ ಹೃದಯಗಳಿಗೆ ಹತ್ತಿರವಾಗಿದ್ದೀರಿ. ನಿಮ್ಮ ಹೆಸರಿನಲ್ಲೇ ಶುಭವಿದೆ, ನಿಮ್ಮ ಪ್ರಯಾಣ ಹೊಸ ಯುಗದ ಆರಂಭವೂ ಆಗಿದೆ. ಈ ಸಮಯದಲ್ಲಿ ನಾವಿಬ್ಬರೂ ಮಾತನಾಡುತ್ತಿದ್ದೇವೆ, ಆದರೆ 140 ಕೋಟಿ ಭಾರತೀಯರ ಭಾವನೆಗಳು ನನ್ನೊಂದಿಗಿವೆ. ನನ್ನ ಧ್ವನಿಯು ಎಲ್ಲಾ ಭಾರತೀಯರ ಉತ್ಸಾಹ ಮತ್ತು ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಬಾಹ್ಯಾಕಾಶದಲ್ಲಿ ಭಾರತದ ಧ್ವಜ ಹಾರಿಸಿದ್ದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಹೆಚ್ಚು ಸಮಯ ತೆಗೆದುಕೊಳ್ಳುತ್ತಿಲ್ಲ, ಆದ್ದರಿಂದ ಮೊದಲು ನನಗೆ ಹೇಳಿ, ಅಲ್ಲಿ ಎಲ್ಲವೂ ಸರಿಯಾಗಿದೆಯೇ? ನೀವು ಚೆನ್ನಾಗಿದ್ದೀರಾ?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

June 28th, 08:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಶುಭಾಂಶು ಅವರು ಪ್ರಸ್ತುತ ಭಾರತದ ಮಾತೃಭೂಮಿಯಿಂದ ಅತಿ ದೂರದಲ್ಲಿದ್ದರೂ, ಅವರು ಸಮಸ್ತ ಭಾರತೀಯರ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದಾರೆ, ಎಂದು ಬಣ್ಣಿಸಿದರು. ಶುಭಾಂಶು ಎಂಬ ಹೆಸರೇ ಶುಭ ಸೂಚಕವಾಗಿದ್ದು, ಅವರ ಈ ಪಯಣವು ಒಂದು ನವಯುಗದ ಆರಂಭಕ್ಕೆ ಮುನ್ನುಡಿಯಾಗಿದೆ, ಎಂದು ಶ್ರೀ ಮೋದಿ ನುಡಿದರು. ಇದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಭಾಷಣೆಯಾಗಿದ್ದರೂ, ಇದರಲ್ಲಿ 140 ಕೋಟಿ ಭಾರತೀಯರ ಭಾವನೆಗಳು ಮತ್ತು ಉತ್ಸಾಹ ಅಡಗಿದೆ. ಶುಭಾಂಶು ಅವರೊಂದಿಗೆ ಮಾತನಾಡುತ್ತಿರುವ ಈ ಧ್ವನಿಯು, ಇಡೀ ರಾಷ್ಟ್ರದ ಸಾಮೂಹಿಕ ಹುಮ್ಮಸ್ಸು ಮತ್ತು ಹೆಮ್ಮೆಯನ್ನು ಹೊತ್ತಿದೆ, ಎಂದು ಅವರು ಹೇಳಿದರು. ಬಾಹ್ಯಾಕಾಶದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ್ದಕ್ಕಾಗಿ ಶುಭಾಂಶು ಅವರಿಗೆ ಪ್ರಧಾನಿಯವರು ಹೃತ್ಪೂರ್ವಕ ಅಭಿನಂದನೆಗಳನ್ನು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದರು. ಕೊನೆಯಲ್ಲಿ, ಪ್ರಧಾನಿಯವರು ಶುಭಾಂಶು ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಬಾಹ್ಯಾಕಾಶ ನಿಲ್ದಾಣದಲ್ಲಿ ಎಲ್ಲವೂ ಸುಸೂತ್ರವಾಗಿದೆಯೇ ಎಂದು ಕೇಳಿದರು.

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

April 27th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.

3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ

September 26th, 05:15 pm

ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು

September 26th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.

ಏಪ್ರಿಲ್ 26 ರಂದು ಕಮಲದ ಗುಂಡಿಗೆ ನಿಮ್ಮ ಮತವು ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಚಳುವಳಿಯನ್ನು ಬಲಪಡಿಸುತ್ತದೆ: ಅಟ್ಟಿಂಗಲ್‌ನಲ್ಲಿ ಪ್ರಧಾನ ಮಂತ್ರಿ

April 15th, 11:35 am

ಅಟ್ಟಿಂಗಲ್‌ನಲ್ಲಿ ನಡೆದ ಎರಡನೇ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ತನ್ನ ಸಂಕಲ್ಪ ಪತ್ರದಲ್ಲಿ ನಮ್ಮ ಪರಂಪರೆಯೊಂದಿಗೆ ಜಾಗತಿಕ ಪ್ರವಾಸಿಗರನ್ನು ಸಂಪರ್ಕಿಸುತ್ತೇವೆ ಮತ್ತು ನಮ್ಮ ಪರಂಪರೆಯ ಮೇಲೆ ವಿಶ್ವ ಪರಂಪರೆಯ ಸ್ಥಾನಮಾನವನ್ನು ನೀಡುತ್ತೇವೆ ಎಂದು ಘೋಷಿಸಿದೆ. ಕೇರಳದಲ್ಲಿ ಇದು ಸಂಭವಿಸುವ ದೊಡ್ಡ ಸಾಧ್ಯತೆಯಿದೆ. ಬಿಜೆಪಿಯ ಯೋಜನೆಯು ಕೇರಳದಲ್ಲಿ ಪರಿಸರ ಪ್ರವಾಸೋದ್ಯಮಕ್ಕಾಗಿ ಹೊಸ ಕೇಂದ್ರಗಳನ್ನು ಸ್ಥಾಪಿಸುತ್ತದೆ, ಇದು ಮಹಿಳೆಯರಿಗೆ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಅವರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ .

ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ಸಭೆಗಳಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

April 15th, 11:00 am

ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ರ್‍ಯಾಲಿಗಳಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.

ಫೆಬ್ರವರಿ 27-28ರಂದು ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 26th, 02:18 pm

ಫೆಬ್ರವರಿ 27ರಂದು ಬೆಳಗ್ಗೆ 10.45ಕ್ಕೆ ಪ್ರಧಾನಮಂತ್ರಿ ಅವರು ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್‌ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡಲಿದ್ದಾರೆ. ಸಂಜೆ 5:15 ಕ್ಕೆ ತಮಿಳುನಾಡಿನ ಮಧುರೈನಲ್ಲಿನಡೆಯಲಿರುವ ‘ಭವಿಷ್ಯವನ್ನು ಸೃಷ್ಟಿಸುವುದು - ಆಟೋಮೋಟಿವ್‌ ಎಂಎಸ್‌ಎಂಇ ಉದ್ಯಮಿಗಳಿಗೆ ಡಿಜಿಟಲ್‌ ಮೊಬಿಲಿಟಿ’ ಕಾರ್ಯಕ್ರಮದಲ್ಲಿಪ್ರಧಾನಿ ಭಾಗವಹಿಸಲಿದ್ದಾರೆ.