ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ ವೆಚ್ಚದಲ್ಲಿ ʻಬಖ್ತಿಯಾರಪುರ್ – ರಾಜಗೀರ್ – ತಿಲೈಯʼ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಸಂಪುಟದ ಅನುಮೋದನೆ

September 24th, 03:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯು, ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ (ಅಂದಾಜು) ವೆಚ್ಚದಲ್ಲಿ ಬಖ್ತಿಯಾರಪುರ್ – ರಾಜಗೀರ್ – ತಿಲೈಯ ನಡುವಿನ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಅನುಮೋದನೆ ನೀಡಿದೆ.

ಬಿಹಾರದ ಗಯಾಜಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 22nd, 12:00 pm

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಜಿ, ಜನಪ್ರಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಜಿತನ್ ರಾಮ್ ಮಾಂಝಿ ಜಿ, ರಾಜೀವ್ ರಂಜನ್ ಸಿಂಗ್, ಚಿರಾಗ್ ಪಾಸ್ವಾನ್ ಜಿ, ರಾಮ್ ನಾಥ್ ಠಾಕೂರ್ ಜಿ, ನಿತ್ಯಾನಂದ ರೈ ಜಿ, ಸತೀಶ್ ಚಂದ್ರ ದುಬೆ ಜಿ, ರಾಜ್ ಭೂಷಣ್ ಚೌಧರಿ ಜಿ, ಉಪಮುಖ್ಯಮಂತ್ರಿಗಳಾದ ಸಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಬಿಹಾರ ಸರ್ಕಾರದ ಸಚಿವರೆ, ನನ್ನ ಸಂಸದ ಮಿತ್ರರಾದ ಉಪೇಂದ್ರ ಕುಶ್ವಾಹ ಜಿ, ಇಲ್ಲಿರುವ ಇತರ ಸಂಸದರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಗಯಾದಲ್ಲಿ 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು

August 22nd, 11:20 am

ಬಿಹಾರದ ಗಯಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮತ್ತು ಮೋಕ್ಷದ ಪವಿತ್ರ ನಗರವಾದ ಗಯಾಕ್ಕೆ ಪ್ರಧಾನಿಯವರು ನಮನ ಸಲ್ಲಿಸಿದರು ಮತ್ತು ವಿಷ್ಣುಪಾದ ಮಂದಿರದ ಅದ್ಭುತ ಭೂಮಿಯಿಂದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಗಯಾ ಆಧ್ಯಾತ್ಮಿಕತೆ ಮತ್ತು ಶಾಂತಿಯ ಭೂಮಿ ಎಂದು ಶ್ರೀ ಮೋದಿ ಹೇಳಿದರು. ಭಗವಾನ್ ಬುದ್ಧ ಜ್ಞಾನೋದಯವನ್ನು ಪಡೆದದ್ದು ಈ ಪುಣ್ಯಭೂಮಿಯಲ್ಲಿ ಎಂದು ಅವರು ಹೇಳಿದರು. ಗಯಾ ಪ್ರಾಚೀನ ಮತ್ತು ಅತ್ಯಂತ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಈ ಪ್ರದೇಶದ ಜನರು ನಗರವನ್ನು ಗಯಾ ಎಂದು ಮಾತ್ರ ಕರೆಯಬಾರದು, ಬದಲಿಗೆ ಗೌರವಯುತವಾಗಿ ಗಯಾಜಿ ಎಂದು ಕರೆಯಬೇಕೆಂದು ಬಯಸುತ್ತಾರೆ ಎಂದು ಹೇಳಿದ ಪ್ರಧಾನಿ, ಈ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಅಭಿನಂದಿಸಿದರು. ಗಯಾದ ತ್ವರಿತ ಅಭಿವೃದ್ಧಿಗಾಗಿ ಕೇಂದ್ರ ಮತ್ತು ಬಿಹಾರದಲ್ಲಿರುವ ತಮ್ಮ ಸರ್ಕಾರಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.