ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 16th, 01:30 pm
ಇದೀಗ ಸ್ಟಾರ್ಟಪ್ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್‌ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.ನವದೆಹಲಿಯಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಅವರು ನಡೆಸಿದ ಸಂವಾದದ ಕನ್ನಡ ಅವತರಣಿಕೆ
October 12th, 06:45 pm
ರಾಮ್-ರಾಮ್! ನಾನು ಹರಿಯಾಣದ ಹಿಸಾರ್ ಜಿಲ್ಲೆಯವನು. ನಾನು ಕಾಬೂಲಿ ಚನಾ (ಕಡಲೆ) ಕೃಷಿಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಸ್ವಲ್ಪ ಮಾತ್ರ ಇತ್ತು..ಕೃಷಿ ಕ್ಷೇತ್ರದಲ್ಲಿ ₹35,440 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು
October 12th, 06:25 pm
ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವು ರೈತರ ಕಲ್ಯಾಣ, ಕೃಷಿಯಲ್ಲಿ ಸ್ವಾವಲಂಬನೆ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರಿಗಿರುವ ನಿರಂತರ ಬದ್ಧತೆಯನ್ನು ಸಾರುತ್ತದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ನಂತರ ಕೃಷಿ ವಲಯಕ್ಕಾಗಿ ₹35,440 ಕೋಟಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. ಅವರು ₹24,000 ಕೋಟಿ ವೆಚ್ಚದ 'ಪಿ.ಎಂ. ಧನ ಧಾನ್ಯ ಕೃಷಿ ಯೋಜನೆ' ಹಾಗೂ ₹11,440 ಕೋಟಿ ವೆಚ್ಚದ 'ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್' ಅನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ವಲಯಗಳಿಗೆ ಸಂಬಂಧಿಸಿದ ₹5,450 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ, ಸುಮಾರು ₹815 ಕೋಟಿ ಮೌಲ್ಯದ ಹೆಚ್ಚುವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಜಿಇಎಂ (GeM)ನಿಂದಾಗಿ, ಭಾರತದಾದ್ಯಂತ ಜೀವನೋಪಾಯ ವರ್ಧನೆ ಖಾತರಿ, ತಳಮಟ್ಟದ ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಗೆ ವೇಗ – ಪ್ರಧಾನಮಂತ್ರಿ ಶ್ಲಾಘನೆ
April 01st, 07:38 pm
ಭಾರತದಾದ್ಯಂತ ಜೀವನೋಪಾಯ ಉತ್ತೇಜನ ಖಾತರಿಪಡಿಸುವಲ್ಲಿ, ತಳಮಟ್ಟದ ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಗೆ ವೇಗ ನೀಡುವಲ್ಲಿ ಸರ್ಕಾರಿ ಇ- ಮಾರುಕಟ್ಟೆ ತಾಣ(ಜಿಇಎಂ) ಪೋರ್ಟಲ್ ಪಾತ್ರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.