ಎವಿಯಾನ್ ನಲ್ಲಿ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್‌ ನ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ

June 17th, 05:34 pm

ಫ್ರಾನ್ಸ್‌ ನ ಎವಿಯಾನ್‌ ನಲ್ಲಿ ನಡೆದಿರುವ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ರಿಪಬ್ಲಿಕ್‌ ನ ಚಾನ್ಸೆಲರ್ ಮಾನ್ಯ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಿದರು. ಈ ವರ್ಷದಲ್ಲಿ ಉಭಯ ನಾಯಕರ ನಡುವಿನ ಎರಡನೇ ಭೇಟಿ ಇದಾಗಿದೆ.

ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 15th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.

ಭಾರತ – ಜರ್ಮನಿ ಜಂಟಿ ಹೇಳಿಕೆ

January 12th, 03:50 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಜರ್ಮನಿ ಒಕ್ಕೂಟ ಗಣರಾಜ್ಯದ ಫೆಡರಲ್ ಚಾನ್ಸಲರ್ ಘನತೆವೆತ್ತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರು 2026ರ ಜನವರಿ 12-13 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಚಾನ್ಸಲರ್ ಅವರೊಂದಿಗೆ 23 ಪ್ರಮುಖ ಜರ್ಮನ್ ಸಿಇಒಗಳು ಮತ್ತು ಉದ್ಯಮ ರಂಗದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಫಲಿತಾಂಶಗಳ ಪಟ್ಟಿ: ಫೆಡರಲ್‌ ರಿಪಬ್ಲಿಕ್‌ ಆಫ್‌ ಜರ್ಮನಿಯ ಚಾನ್ಸಲರ್‌ ಅವರ ಭಾರತ ಭೇಟಿ (ಜನವರಿ 12-13, 2026)

January 12th, 03:47 pm

ದ್ವಿಪಕ್ಷೀಯ ರಕ್ಷ ಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಉದ್ದೇಶದ ಜಂಟಿ ಘೋಷಣೆ

ಪ್ರಧಾನಿ ಮೋದಿ, ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು

January 12th, 03:04 pm

ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅವರು ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.

ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಭೇಟಿ ನೀಡಿದರು

January 12th, 02:42 pm

ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ನದಿ ದಂಡೆಯಲ್ಲಿ ಆಯೋಜಿಸಲಾದ ವರ್ಣರಂಜಿತ ಮತ್ತು ರೋಮಾಂಚಕ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಿದರು. ಪ್ರದರ್ಶನದಲ್ಲಿರುವ ಗಾಳಿಪಟಗಳು ಆಪರೇಷನ್ ಸಿಂಧೂರ್, ಹನುಮಾನ್, ತ್ರಿವರ್ಣ ಮತ್ತು ಇತರವುಗಳನ್ನು ಚಿತ್ರಿಸಿವೆ. ಚಾನ್ಸೆಲರ್ ಮೆರ್ಜ್ ಗಾಳಿಪಟ ಹಾರಿಸಲು ಪ್ರಯತ್ನಿಸಿದಾಗ ಪ್ರಧಾನಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

January 12th, 01:35 pm

ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.

ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

September 24th, 06:33 pm

'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.

ಜರ್ಮನಿಯ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಭೇಟಿಯಾದರು

September 03rd, 08:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿಯಾದರು. ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಸಹಭಾಗಿತ್ವವನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಶ್ರೀ ಮೋದಿ

June 17th, 11:58 pm

ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿಯಾದರು. 2025 ಮೇ ತಿಂಗಳಲ್ಲಿ ಚಾನ್ಸೆಲರ್ ಮೆರ್ಜ್ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಮೆರ್ಜ್ ಅವರನ್ನು ಅಭಿನಂದಿಸಿದರು. ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತ ದುರಂತದ ಬಗ್ಗೆ ಜರ್ಮನ್ ಸರ್ಕಾರ ವ್ಯಕ್ತಪಡಿಸಿದ ಸಂತಾಪಕ್ಕೆ ಅವರು ಆಳವಾದ ಕೃತಜ್ಞತೆ ವ್ಯಕ್ತಪಡಿಸಿದರು.

Prime Minister Narendra Modi congratulates Chancellor Friedrich Merz on assuming office

May 20th, 06:25 pm

Prime Minister Shri Narendra Modi held a telephone conversation with Mr. Friedrich Merz today and congratulated him on assuming office as the Chancellor of the Federal Republic of Germany.

ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಿ ಅಭಿನಂದನೆ

May 06th, 09:53 pm

ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Today, India is the world’s fastest-growing large economy, attracting global partnerships: PM

November 22nd, 10:50 pm

PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು

November 22nd, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್‌ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.

For the BJP, the aspirations and pride of tribal communities have always been paramount: PM Modi in Chaibasa

November 04th, 12:00 pm

PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”

PM Modi campaigns in Jharkhand’s Garhwa and Chaibasa

November 04th, 11:30 am

Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”

ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 29th, 11:00 am

ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!