'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025ರಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಸಂವಾದ
November 20th, 12:30 pm
ಇವೆಲ್ಲವೂ ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು, ಇದು ತ್ಯಾಜ್ಯ... ಸರ್, ಇದು ಬಾಳೆಹಣ್ಣಿನ ತ್ಯಾಜ್ಯದಿಂದ ಬಂದಿದೆ; ಇದು ಬಾಳೆಹಣ್ಣಿನ ಮೌಲ್ಯವರ್ಧನೆಯಿಂದ ಬಂದಿದೆ, ಸರ್ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 20th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ ಉತ್ಪನ್ನಗಳು ಭಾರತದಾದ್ಯಂತ ಆನ್ ಲೈನ್ ನಲ್ಲಿ ಮಾರಾಟವಾಗುತ್ತವೆಯೇ ಎಂದು ಪ್ರಧಾನಮಂತ್ರಿಯವರು ಕೇಳಿದರು, ಅದಕ್ಕೆ ರೈತರು ಹೌದು ಎಂದು ಉತ್ತರಿಸಿದರು. ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ವೈಯಕ್ತಿಕ ಕೊಡುಗೆದಾರರ ಮೂಲಕ ತಾವು ಇಡೀ ತಮಿಳುನಾಡನ್ನು ಪ್ರತಿನಿಧಿಸುತ್ತಿರುವುದಾಗಿ ರೈತರು ತಿಳಿಸಿದರು. ತಮ್ಮ ಉತ್ಪನ್ನಗಳು ಆನ್ ಲೈನ್ನಲ್ಲಿ ಮಾರಾಟವಾಗುವುದರ ಜೊತೆಗೆ ರಫ್ತು ಕೂಡ ಆಗುತ್ತವೆ ಮತ್ತು ಭಾರತದಾದ್ಯಂತ ಸ್ಥಳೀಯ ಮಾರುಕಟ್ಟೆಗಳು ಹಾಗೂ ಸೂಪರ್ಮಾರ್ಕೆಟ್ ಗಳಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ FPO ನಲ್ಲಿ ಎಷ್ಟು ಜನರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದು ಶ್ರೀ ಮೋದಿ ಕೇಳಿದರು, ಇದಕ್ಕೆ ಉತ್ತರಿಸಿದ ರೈತರು, ಸುಮಾರು ಒಂದು ಸಾವಿರ ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಇದನ್ನು ಆಲಿಸಿದ ಪ್ರಧಾನಮಂತ್ರಿಯವರು, ಬಾಳೆ ಕೃಷಿಯನ್ನು ಒಂದೇ ಪ್ರದೇಶದಲ್ಲಿ ಪ್ರತ್ಯೇಕವಾಗಿ ಮಾಡಲಾಗುತ್ತಿದೆಯೇ ಅಥವಾ ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ರೈತರು, ವಿವಿಧ ಪ್ರದೇಶಗಳು ವಿಭಿನ್ನ ಮತ್ತು ವಿಶೇಷ ಉತ್ಪನ್ನಗಳಲ್ಲಿ ಪರಿಣತಿ ಹೊಂದಿವೆ ಎಂದು ತಿಳಿಸಿದರು ಮತ್ತು ತಮ್ಮಲ್ಲಿ ಜಿಐ (GI - ಭೌಗೋಳಿಕ ಸೂಚಕ) ಟ್ಯಾಗ್ ಹೊಂದಿರುವ ಉತ್ಪನ್ನಗಳು ಸಹ ಇವೆ ಎಂದು ಹೇಳಿದರು.ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.Let’s take a pledge together — Bihar will stay away from Jungle Raj! Once again – NDA Government: PM Modi in Chhapra
October 30th, 11:15 am
In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.This election will bring RJD-Congress their biggest defeat ever, and NDA’s biggest victory: PM Modi in Muzaffarpur, Bihar
October 30th, 11:10 am
PM Modi addressed a massive public meeting in Muzaffarpur, Bihar and began by saying that this was his first public meeting after the Chhath Mahaparv. He said Chhath is the pride of Bihar and the nation, a festival celebrated across India and even around the world. PM Modi also launched a campaign to promote Chhath songs across the nation. He said, “The public will choose the best tracks, and their creators will be awarded - boosting the preservation of Chhath tradition.”PM Modi’s grand rallies electrify Muzaffarpur and Chhapra, Bihar
October 30th, 11:00 am
PM Modi addressed two massive public meetings in Muzaffarpur and Chhapra, Bihar. Beginning his first rally, he noted that this was his first public meeting after the Chhath Mahaparv. He said that Chhath is the pride of Bihar and of the entire nation—a festival celebrated not just across India, but around the world. PM Modi also announced a campaign to promote Chhath songs nationwide, stating, “The public will choose the best tracks, and their creators will be awarded - helping preserve and celebrate the tradition of Chhath.”ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 30th, 11:29 am
ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 30th, 10:53 am
ಬಿಹಾರದ ಕರಕಟ್‌ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.