ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 11th, 02:45 pm

2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.

ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

January 11th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.

ಮಾರ್ಚ್ 3 ರಂದು ಗಿರ್ ನಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

March 03rd, 04:48 pm

ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದು, ಅಲ್ಲಿ ಅವರು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಗುಜರಾತ್ ನ ಗಿರ್‌ ನಲ್ಲಿ ಸಫಾರಿ ಕೈಗೊಂಡ ಪ್ರಧಾನಮಂತ್ರಿ

March 03rd, 12:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯಾದ ಸಿಂಹಗಳ ನೆಲೆವೀಡಾಗಿರುವ ಗುಜರಾತ್‌ನ ಗಿರ್‌ನಲ್ಲಿ ಸಫಾರಿ ಕೈಗೊಂಡರು. ಕಳೆದ ಹಲವು ವರ್ಷಗಳಿಂದ ಏಷ್ಯಾಟಿಕ್ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆಯನ್ನು ಖಾತ್ರಿಪಡಿಸಿಕೊಂಡಿರುವ ಸಾಮೂಹಿಕ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.