ಫೆಬ್ರವರಿ 19ರಂದು ಭಾರತ ಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 18th, 03:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 19ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ಕ್ಕೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ, ಫೆಬ್ರವರಿ 18ರಂದು ಸಂಜೆ 7 ಗಂಟೆಗೆ ಭಾರತ ಮಂಟಪದಲ್ಲಿ ಶೃಂಗಸಭೆಯಲ್ಲಿ ಭಾಗವಹಿಸುವ ವಿವಿಧ ದೇಶಗಳ ನಾಯಕರನ್ನು ಪ್ರಧಾನಮಂತ್ರಿಯವರು ಸ್ವಾಗತಿಸಲಿದ್ದಾರೆ. ಶೃಂಗಸಭೆಯಲ್ಲಿ ಭಾಗವಹಿಸುವ ಹಲವಾರು ವಿಶ್ವ ನಾಯಕರೊಂದಿಗೆ ಪ್ರಧಾನಮಂತ್ರಿಯವರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.