ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:30 pm
ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್‌ಲ್ಯಾಂಡ್ಸ್‌ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:20 pm
ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.ಗುಜರಾತ್‌ನ ವಾವ್-ಥರಡ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 05:00 pm
ಕೆಲವೇ ದಿನಗಳ ಹಿಂದೆ, ನವರಾತ್ರಿಯ ಪವಿತ್ರ ಹಬ್ಬವು ಮುಕ್ತಾಯಗೊಂಡಿತು. ಮಾತೆ ಅಂಬಾಜಿಯವರ ಕೃಪೆಯಿಂದ ಇಂದು ಅವರ ಪಾದಗಳಿರುವಲ್ಲಿಗೆ ಬರುವ ಭಾಗ್ಯ ನನಗೆ ಸಿಕ್ಕಿತು. ಅವರ ಕೃಪೆಯಿಂದ ಇಂದು, ನನ್ನ ಕುಟುಂಬದ ಸದಸ್ಯರೆಲ್ಲರನ್ನೂ ನೋಡುವ ಭಾಗ್ಯ ನನಗೆ ಸಿಕ್ಕಿತು. ನಾನು ತಾಯಿ ಅಂಬಾಜಿಯವರ ಪಾದಗಳಿಗೆ ನಮಸ್ಕರಿಸುತ್ತೇನೆ. ನಮ್ಮ ವರಾಹ ರೂಪಿ ಶ್ರೀ ಧರ್ಣಿಧರ್ಜಿ, ಮುಖದ ಕೃಷ್ಣ, ನಾನು ಇಂದು ಅವರಿಗೆ ನನ್ನ ಗೌರವಯುತ ನಮನ ಸಲ್ಲಿಸುತ್ತೇನೆ. ಇಂದು ನಾವು ಭಗವಾನ್ ಮಹಾವೀರ ಜಯಂತಿಯನ್ನು ಸಹ ಆಚರಿಸುತ್ತಿದ್ದೇವೆ ಎಂಬುದು ಆಹ್ಲಾದಕರ ಕಾಕತಾಳೀಯ ಸಂದರ್ಭ. ನಮ್ಮ ಈ ಪ್ರದೇಶವು ಅನೇಕ ಜೈನ ತೀರ್ಥಕ್ಷೇತ್ರಗಳ ಭೂಮಿಯಾಗಿದೆ. ನಾನು ಭಗವಾನ್ ಮಹಾವೀರರಿಗೆ ನಮಸ್ಕರಿಸುತ್ತೇನೆ ಮತ್ತು ಪವಿತ್ರ ಮಹಾವೀರ ಜನ್ಮ ಕಲ್ಯಾಣಕ್ ದಿನ, ಮಹಾವೀರ ಜಯಂತಿಯಂದು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.ಗುಜರಾತ್‌ನ ವಾವ್-ಥರಡ್‌ನಲ್ಲಿ ₹20,000 ಕೋಟಿಗೂ ಹೆಚ್ಚು ಮೌಲ್ಯದ ರಾಷ್ಟ್ರ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
March 31st, 04:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ವಾವ್-ಥರಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಉತ್ತರ ಗುಜರಾತ್‌ಗೆ ಸುಮಾರು ₹20,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು. ಪವಿತ್ರ ನವರಾತ್ರಿ ಉತ್ಸವವು ಇತ್ತೀಚೆಗೆ ಮುಕ್ತಾಯಗೊಂಡಿದೆ ಮತ್ತು ಆ ದಿನ ಭಗವಾನ್ ಮಹಾವೀರ ಜಯಂತಿಯೂ ಆಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಮಾ ಅಂಬಾಜಿ ಮತ್ತು ಭಗವಾನ್ ಶ್ರೀ ಧರಣಿಧರ್ಜಿ ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದರು.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.ಇಂಡಿಯಾ ಚಿಪ್ ಲಿಮಿಟೆಡ್‌ನ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
February 21st, 05:30 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜಿ, ಜಿತಿನ್ ಪ್ರಸಾದ ಜಿ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರೆ, ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಬಿಸಿನೆಸ್ ಗ್ರೂಪ್ ಅಧ್ಯಕ್ಷರಾದ ಬಾಬ್ ಚೆನ್, ಎಚ್‌ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷರಾದ ರೋಶ್ನಿ ನಾಡರ್ ಜಿ, ಕಾರ್ಯಕ್ರಮದಲ್ಲಿ ಹಾಜರಿರುವ ಉದ್ಯಮ ಮುಖಂಡರೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಉತ್ತರಪ್ರದೇಶದಲ್ಲಿ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ನಡೆದ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ನಂತರ, ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗುವತ್ತ ಭಾರತದ ಪ್ರಯಾಣ ಸಾಗಿದೆ, ಈ ಸಮಾರಂಭವು ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.Human-Centric approach should be the way forward for G20 Nations: PM Modi
November 22nd, 09:39 pm
PM Modi made the concluding remarks at the Virtual G20 Summit. He emphasized on the path-breaking G20 Leaders' Declaration that was accorded a unanimous acceptance. He also reiterated the commitment of 'Zero Tolerance' to terrorism and reinforced the concept of the 'Two State Solution' for the Israel-Palestine conflict.ʻಜಿ 20’ ನಾಯಕರ ವರ್ಚುವಲ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ
November 22nd, 06:37 pm
ನನ್ನ ಆಹ್ವಾನವನ್ನು ಸ್ವೀಕರಿಸಿ ಇಂದು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಲು ಬಯಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.