ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.